ಮೇ 22 ರಂದು ಗ್ರಾಮಾಂತರ ಬಸವ ಜಯಂತೋತ್ಸವ, ಪ್ರವಚನ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ 20- ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದಿಂದ ಪ್ರತಿ ವರ್ಷದಂತೆ ಈ ಬಾರಿ ಅದ್ದೂರಿಯಾಗಿ ಎರಡು ದಿನಗಳ ಕಾಲ ಮೇ 21 ಮತ್ತು 22 ರಂದು ಗ್ರಾಮಾಂತರ ಬಸವ ಜಯಂತೋತ್ಸವ ಮತ್ತು ಪೂಜ್ಯದ್ವಯರ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಮಠಾಧ್ಯಕ್ಷರಾದ ಶ್ರೀ ಚನ್ನಬಸವಸ್ವಾಮೀಜಿ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ 22 ರಂದು ಬೆಳಗ್ಗೆ 5 ಗಂಟೆಗೆ ಪೂಜ್ಯರ ಗುದ್ದುಗೆಗೆ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಬೆಳಗ್ಗೆ 6 ಗಂಟೆಗೆ ಮಲ್ಲನಮೂಲೆ ಮಠಾಧ್ಯಕ್ಷರಾದ ಶ್ರೀ ಚನ್ನಬಸವಸ್ವಾಮೀಗಳಿಮದ ಷಟ್ಸ್ಥಲ ಧ್ವಜಾರೋಹಣ ಬೆಳಗ್ಗೆ 7 ಗಂಟೆಗೆ ಕನಕಪುರ ದೇಗಲ ಮಠಾಧ್ಯಕ್ಷರಾದ ಶ್ರೀ ಮುಮ್ಮಡಿ ನಿರ್ವಾಣಸ್ವಾಮಿಗಳಿಂದ ಇಷ್ಟಲಿಂಗಪೂಜೆ, ಬೆಳಗ್ಗೆ 11 ಗಂಟೆಗೆ ಬೇಲೂರು ಮಠದ ಶ್ರೀ ಮಹಾಚಿತ ಬಸವಲಿಂಗಸ್ವಾಮೀಜಿ ಗಳಿಂದ ಪ್ರವಚನ ಆಯೋಜನೆ ಮಾಡಲಾಗಿದೆ.
ಮೇ 22 ರ ಬುಧವಾರ ಬೆಳಗ್ಗೆ 10 ಗಂಟೆಗೆ ಗ್ರಾಮಾಂತರ ಬಸವ ಜಯಂತೋತ್ಸವ ಮೆರವಣಿಗೆÉ ಪೂಜ್ಯರು ಚಾಲನೆ ನೀಡಲಿದ್ದಾರೆ. ಪ್ರಮುಖ ಬೀದಿಗಳಲ್ಲಿ ನಂದಿ ಧ್ವಜ, ವೀರಗಾಸೆ, ಭಜನೆ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ.
ಮೇ 21 ರ ಮಂಗಳವಾರ ರಾತ್ರಿ 8 ಗಂಟೆಗೆ ಶ್ರೀ ಸಿದ್ದಮಲ್ಲೇಶ್ವರ ಕಲಾ ತಂಡದಿಮದ ಪ್ರಭುಲಿಂಗಲೀಲೆ ನಾಟಕವನ್ನು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಎರಡು ದಿನಗಳ ಕಾಲ ನಿರಂತರ ದಾಸೋಹ ನಡೆಯಲಿದ್ದು, ವಿವಿಧ ಭಾಗಗಳಿಂದ ಹರಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 50 ಸಾವಿರಕ್ಕು ಹೆಚ್ಚು ಶ್ರೀಮಠದ ಭಕ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಶ್ರೀ ಚನ್ನಬಸವಸ್ವಾಮೀಜಿ ತಿಳಿಸಿದರು.