ಮೇ 23 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ದಾವಣಗೆರೆ;  ಮೇ. 20; ಜಿಲ್ಲೆಯಲ್ಲಿ ಮೇ 23 ರಿಂದ ಜೂನ್ 3 ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ. ಎನ್ ಲೋಕೇಶ್  ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  2023ನೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು, ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪೂರಕ ಪರೀಕ್ಷೆಯ ದಿನಾಂಕವನ್ನು ಬಿಡುಗಡೆ ಮಾಡಿದ್ದು, ದಾವಣಗೆರೆಯ 4 ಕೇಂದ್ರಗಳಲ್ಲಿ 2224 ವಿದ್ಯಾರ್ಥಿಗಳು, ಹರಿಹರ-597. ಚನ್ನಗಿರಿ-609, ಜಗಳೂರು-603, ಹೊನ್ನಾಳಿ-468 ತಲಾ ಒಂದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ಒಟ್ಟು  4501 ವಿಧ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ
ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಸಂಬಂಧಿ ಅಕ್ರಮ ಚಟುವಟಿಕೆ ನಡೆಯದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಗುರುತಿನ ಚೀಟಿ, ನಿಡಲಾಗುತ್ತದೆ.  ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು  ಕ್ರಮವಹಿಸಬೇಕು.ಜಿಲ್ಲಾ ಮಟ್ಟದಲ್ಲಿ ಒಂದು ಜಾಗೃತ ದಳವನ್ನು ನೇಮಿಸಲಾಗಿದ್ದು, ಪರೀಕ್ಷಾ ಕಾರ್ಯನಿರತ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಲ್ಯಾಪ್ ಟಾಪ್, ಇ-ಕ್ಯಾಮರಾ ಇತ್ಯಾದಿ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿμÉೀಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಪರೀಕ್ಷಾರ್ಥಿಗಳನ್ನು ನೆಲದ ಮೇಲೆ ಕೂರಿಸಿ ಪರೀಕ್ಷೆ ಬರೆಸದೇ ಪೀಠೋಪಕರಣಗ¼ನ್ನು ಅಳವಡಿಸಬೇಕು.ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಎಂದಿನಂತೆ ಪರೀಕ್ಷೆ ಹಾಲ್ ಟಿಕೆಟ್ ಅನ್ನು ತಮ್ಮ ಕಾಲೇಜುಗಳಿಂದ ಪಡೆದು ಕಡ್ಡಾಯವಾಗಿ ತೆಗೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕು ಪ್ರವೇಶ ಪತ್ರವಿಲ್ಲದೆ ಪರೀಕ್ಷೆಗೆ ಕೂರಲು ಅವಕಾಶವಿರುವುದಿಲ್ಲ ಹಾಗೆಯೇ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.