ಕಲಬುರಗಿ.ಮೇ.27:ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೆಎಸ್‍ಆರ್‍ಪಿ 6ನೇ ಪಡೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಇದೇ ಮೇ 29 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯ ಸುಲ್ತಾನಪುರ ಕೆ.ಎಸ್.ಆರ್.ಪಿ 6ನೇ ಪಡೆಯ ಸಭಾಂಗಣದಲ್ಲಿ “ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆ” (World Schizophrenia Day) ಯನ್ನು ಏರ್ಪಡಿಸಲಾಗಿದೆ.
ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಮ್ಮದ ಅನ್ವರ್ ಹುಸೇನ ಮೋಗಲಾನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ ಮಾಲಿ, ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ. ರಾಜಕುಮಾರ ಕುಲಕರ್ಣಿ ಹಾಗೂ ಗುಲಬರ್ಗಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಬಿ.ಎಸ್. ನಾಶಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರಾದ ಡಾ. ಮಹಮ್ಮದ್ ಇರಫಾನ್ ಮಹಾಗಾವಿ ಅವರು ಉಪನ್ಯಾಸ ನೀಡುವರು. ಕಲಬುರಗಿ ಸುಲ್ತಾನಪುರ ಕೆ.ಎಸ್.ಆರ್.ಪಿ. ಆರನೇ ಪಡೆಯ ಕಮಾಂಡೆಂಟ್‍ರಾದ ಬಸವರಾಜ ಜಿಳ್ಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
“ಸಮಾಜದ ದಯಾಳುತನದ ಶಕ್ತಿಯ ಆಚರಣೆ” ಈ ವರ್ಷದ ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆಯ ಘೋಷಣೆಯಾಗಿದೆ.