
ಬೆಂಗಳೂರು, ಮೇ ೨೩- ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೇ ೨೯ ರಿಂದ ಶಾಲೆಗಳು ಆರಂಭವಾಗಲಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಮೇ ೨೯ ರಿಂದ ರಾಜ್ಯಾದಾದ್ಯಂತ ೨೦೨೩-೨೪ನೇ ಸಾಲಿನ ಶೈಕ್ಷಣಿಕ ಚಟುವೆಕೆಗಳು ರಾಜ್ಯಾದ್ಯಂತ ಏಕ ಕಾಲದಲ್ಲಿ ಆರಂಭಗೊಳ್ಳಲಿದ್ದು, ಶೈಕ್ಷಣಿಕ ವರ್ಷದ ಯಶಸ್ವಿ ಅನುಷ್ಠಾನಕ್ಕಾಗಿ ಮಾರ್ಗಸೂಚಿ ಸಿದ್ಧಪಡಿಸಿರುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.
ಮೇ ೮ ರಿಂದ ಶಾಲೆ ಆರಂಭ, ಆ. ೮ ರಿಂದ ದಸರಾ ರಜೆ, ೨೦೨೪ರ ಏ. ೧೧ ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಶಿಕ್ಷಣ ಇಲಾಖೆಯ ಮಾರ್ಗಸೂಚಿಯನ್ವಯ ವಾರ್ಷಿಕ ಹಾಗೂ ಮಾಹೆವಾರು ಪಾಠ ಹಂಚಿಕೆ ಪಠ್ಯೇತರ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಚಟುವಟಿಕೆಗಳ ನಿರ್ವಹಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ ಎಂದು ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
೨೦೨೩ರ ಮೇ ೨೯ ರಿಂದ ಶಾಲಾರಂಭಕ್ಕೆ ಸೂಚಿಸಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಜಾರಿಗೊಳಿಸಲು ರಜಾ ದಿನಗಳು ವಾರ್ಷಿಕ ಕಾರ್ಯಸೂಚಿಯನ್ನು ಸಿದ್ಧಪಡಿಸಲಾಗಿದೆ.
ರಾಜ್ಯಪಠ್ಯ ಕ್ರಮದ ಎಲ್ಲ ಶಾಲೆಗಳಲ್ಲಿ ಮಾರ್ಗಸೂಚಿಯನ್ವಯ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಿ ಅನುಪಾಲನೆ ಮಾಡಲು ಸೂಚಿಸಲಾಗಿದೆ.