ಮೇ 30 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ.ಮೇ.28:ಗುಲಬರ್ಗಾ ವಿದ್ಯುಚ್ಚಕ್ತಿ ಸರಬರಾಜು ಕಂಪನಿ ನಿಯಮಿತ ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ 110/11 ಕೆವಿ ಕಪನೂರ ವಿದ್ಯುತ್ ವಿತರಣಾ ಕೇಂದ್ರದ ಕೆಳಕಂಡ ಫೀಡರ್‍ಗಳ ವ್ಯಾಪ್ತಿಯಲ್ಲಿ ತುರ್ತು ಕಾರ್ಯಕೈಗೊಂಡಿರುವ ಪ್ರಯುಕ್ತ ಇದೇ ಮೇ 30 ರಂದು ಬೆಳಗಿನ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಪನೂರ ವಿದ್ಯುತ್ ವಿತರಣಾ ಕೇಂದ್ರ: ಕೆ.ಐ.ಡಿ.ಬಿ-1 ನೇ ಹಂತ, ಕೆ.ಐ.ಡಿ.ಬಿ. 2ನೇ ಹಂತ ಹಾಗೂ ಬೇಲೂರ್ ಇಂಡಸ್ಟ್ರೀಯಲ್ ಫೀಡರ್‍ಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಈ ಫೀಡರ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು ಮತ್ತು ಇತರೆ ಸುತ್ತಮುತ್ತಲಿನ ಗ್ರಾಮದ ಎಲ್ಲಾ ಗ್ರಾಹಕರು ಇದಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.