ಮೇ 5ರಂದು ಅಫಜಲಪುರಕ್ಕೆ ಅಖಿಲೇಶ್‍ಯಾದವ್

ಕಲಬುರಗಿ,ಮೇ 1: ಅಫಜಲಪುರ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿಆರ್.ಡಿ.ಪಾಟೀಲ್ ಪರವಾಗಿ ಪ್ರಚಾರ ಕೈಗೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೇ 5ರಂದುಅಫಜಲಪುರ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಮಹಾಂತೇಶ್ ಪಾಟೀಲ್ ಸೊನ್ನ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೇ5ರಂದು ಮಧ್ಯಾಹ್ನ 12ಕ್ಕೆ ಸಮಾಜವಾದಿ ಪಕ್ಷದ ಅಭ್ಯರ್ಥಿ ಆರ್.ಡಿ.ಪಾಟೀಲ್ ಪರವಾಗಿಅಫಜಲಪುರ ಪಟ್ಟಣದಲ್ಲಿ ಬೃಹತ್ ರ್ಯಾಲಿ ನಡೆಯಲಿದೆ. ಈ ರ್ಯಾಲಿಯಲ್ಲಿ ಅಖಿಲೇಶ್ ಯಾದವ್‍ಪಾಲ್ಗೊಂಡು ಪಾಟೀಲ್ ಪರವಾಗಿ ಮತ ಯಾಚನೆ ಮಾಡಲಿದ್ದಾರೆ ಎಂದರು.
ಈ ರ್ಯಾಲಿಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಆರ್.ಡಿ.ಪಾಟೀಲ್ ಹಾಗೂ ತಾವುಅಫಜಲಪುರ ವಿಧಾನಸಭಾ ಕ್ಷೇತ್ರದ 100ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರಚಾರಕಾರ್ಯ ಕೈಗೊಂಡಿರುವುದಾಗಿ ಹೇಳಿದರು.
ಕ್ಷೇತ್ರದಲ್ಲಿ ಆರ್.ಡಿ.ಪಾಟೀಲ್ ಪರವಾದ ಅಲೆ ಸೃಷ್ಟಿಯಾಗಿದೆ. ಹೀಗಾಗಿ, ಈ ಚುನಾವಣೆಯಲ್ಲಿಅವರು ಹೆಚ್ಚು ತ್ರಾಸಿಲ್ಲದೆ ಗೆಲುವು ಸಾಧಿಸಲಿದ್ದಾರೆ ಎಂದು ಮಹಾಂತೇಶ್ ಪಾಟೀಲ್ ವಿಶ್ವಾಸವ್ಯಕ್ತಪಡಿಸಿದರು.
ಪಕ್ಷದ ಅಫಜಲಪುರ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಗೌಡ ಪಾಟೀಲ್,ಮುಖಂಡರಾದ ಹೀರೂ ರಾಠೋಡ್ ಮತ್ತು ಗುರುದೇವ ಪೂಜಾರಿ ಆನೂರ್‍ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.