ಮೇ 7ರಂದು ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಮತದಾನ: ಜಿಲ್ಲಾಧಿಕಾರಿ ಟಿ.ಭೂಬಾಲನ್

ಸಂಜೆವಾಣಿ ವಾರ್ತೆ,
ವಿಜಯಪುರ,ಮಾ.17: ಭಾರತ ಚುನಾವಣೆ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಧಿಸೂಚನೆಯನ್ನು ಹೊರಡಿಸಿದ್ದು, ವಿಜಯಪುರ ಎಸ್‍ಸಿ ಮೀಸಲು ಲೋಕಸಭೆ ಕ್ಷೇತ್ರದಲ್ಲಿ ಮೇ. 7ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ಹೇಳಿದರು.
ಶನಿವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜೂ. 4 ರಂದು ಮತ ಎಣಿಕೆ ನಡೆಯಲಿದೆ. ಅದೇ ದಿನ ಫಲಿತಾಂಶ ಹೊರ ಬೀಳಲಿದೆ. ಚುನಾವಣೆ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದೆ. ಜೂ.6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದರು.
ಚುನಾವಣೆಯ ಅಧಿಸೂಚನೆಯನ್ನ ಏ. 12 ರಂದು ಹೊರಡಿಸಲಾಗುವುದು. ಏ. 19 ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದೆ. ಏ. 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 22ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳುವ ದಿನವಾಗಿದೆ. ಮೆ. 7 ರಂದು ಮತದಾನ ನಡೆಯಲಿದೆ. ಜೂ.4ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಲು. 9 ಜನ ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2085 ಮತಗಟ್ಟೆಗಳಿದ್ದು, 19,19,048 ಜನ ಮತದಾರರು ಇದ್ದಾರೆ. ಈ ಪೈಕಿ 9,76,073 ಪುರುಷರು, 9,42,757 ಮಹಿಳೆಯರು, 218 ಇತರೆ ಮತದಾರರು ಇದ್ದಾರೆ. 17,159 ವಿಶೇಷಚೇತನರು, 85 ವರ್ಷ ಮೇಲ್ಪಟ್ಟ 21,586 ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಅಂಚೆ ಮತ ಪತ್ರ ವಿತರಿಸುವ ಕುರಿತಂತೆ ಭಾರತ ಚುನಾವಣೆ ಆಯೋಗವು ನೀಡುವ ನಿರ್ದೇಶನ ಅನುಸಾರ ಕ್ರಮ ವಹಿಸಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 29 ಚೆಕ್‍ಪೆÇೀಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ 12 ಅಂತರರಾಜ್ಯ ಚೆಕ್‍ಪೆÇೀಸ್ಟ್, 17 ಅಂತರ ಜಿಲ್ಲಾ ಚೆಕ್‍ಪೆÇೀಸ್ಟ್ ಸ್ಥಾಪಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಶಾಂತಿ ಸುವ್ಯವಸ್ಥೆಯಿಂದ ನಡೆಸಲು 8ಡಿಎಸ್ಪಿ, 26 ಪಿಐ, 90 ಪಿಎಸ್‍ಐ, 118 ಎಎಸ್‍ಐ, 1,888 ಪಿಸಿ, 976 ಹೋಮ್‍ಗಾರ್ಡ ಸೇರ ಒಟ್ಟು 3106 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಹಂತದಲ್ಲಿ ಹಾಗೂ ವಿಧಾನಸಭಾ ಮತಕ್ಷೇತರವಾರು ದೂರು ನಿರ್ವಹಣಾ ಕೋಶವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಚುನಾವಣಾ ವಿಷಯದ ಕುರಿತು ದೂರು ಸಲ್ಲಿಸಲು ಜಿಲ್ಲಾ ನೋಡಲ್ ಅಧಿಕಾರಿ ಮೊಬೈಲ್-9945354447ಗೆ ಕರೆ ಮಾಡಿ ದೂರು ದಾಖಲಿಸಬಹುದು. ಚುನಾವಣೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದರೆ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯಮ ನಿರ್ವಹಣಾಧಿಕಾರಿ ರಿಶಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.