ಮೇ 7ರ ವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಬೀದರ. ಏ.19: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ಯ ಬೀದರ ಜಿಲ್ಲಾ ಮತಗಟ್ಟೆಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ದಿನಾಂಕ 07-05-2024ರಂದು ಮತದಾನ ಜರುಗಲಿದ್ದು, ಮತದಾನವು ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಗಮವಾಗಿ ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ದಿನಾಂಕ 05-05-2024ರ ಸಾಯಂಕಾಲ 6 ಗಂಟೆಯಿಂದ 07-05-2024ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಆದೇಶ ಹೋರಡಿಸಿದ್ದಾರೆ.
ಷರತ್ತುಗಳು: ಬೀದರ ಜಿಲ್ಲೆಯ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೇರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಿಲ್ಲ. ಶಸ್ತ್ರ, ಬಡಿಗೆ ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ. ಹಾಗೂ ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್- ಕೆಫೆಗಳನ್ನು ನಿಭರ್ಂಧಿಸಿದೆ. ಕಲ್ಲುಗಳನ್ನು, ಕ್ವಾರಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರರ್ದಶನ, ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಸ್ಥಳಗಳಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸÀನ್ನೆ ಅಥವಾ ನಕಲಿ ಪ್ರರ್ದಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರರ್ದಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಹಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್-19 ಮಾರ್ಗಸೂಚಿಗಳನ್ನು ಮತ್ತು ನಿಯಮಗಳನ್ನು ಪಾಲಿಸುವುದು.
ಮತಗಟ್ಟೆಗಳ ಸುತ್ತಾ 200 ಮೀಟರ್ ಅಂತರದಲ್ಲಿ ಮೊಬೈಲ್ ಫೆÇೀನ್, ಕಾಡ್ರ್ಲೇಸ್ ಫೆÇೀನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು, ಸಿಬ್ಬಂದಿಗಳು ಹೋರತುಪಡಿಸಿ). ಮತಗಟ್ಟೆಗಳ ಸುತ್ತಾ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೆÇೀಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳು ಹಾಗೂ ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೋರಗೆ ಹೋಗತಕ್ಕದ್ದು, ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‍ಗಳು ಮತ್ತು ಅತಿಥಿಗೃಹಗಳನ್ನು ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಪತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಬೇಕು.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಪೆÇಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಬೀದರ ಜಿಲ್ಲಾ ಪೆÇಲೀಸ್ ಅಧಿಕ್ಷಕರು ಇವರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕೆಂದು ಆದೇಶಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.