ಮೈಕೊರೆವ ಚಳಿಗೆ ದೆಹಲಿ ತತ್ತರ

ನವದೆಹಲಿ,ಡಿ. ೨೦- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅತಿ ಕಡಿಮೆ ೩.೯ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ನೆತ್ತಿಯ ಮೇಲೆ ಸೂರ್ಯ ಕಾಣಿಸಿಕೊಂಡಿದ್ದರು ಕನಿಷ್ಠ ತಾಪಮಾನದಿಂದ ಜನರು ನಡುಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮನೆಯಿಂದ ಹೊರಬರಲು ಜನರು ಹಿಂದೇಟು ಹಾಕುವ ಪರಿಸ್ಥಿತಿ ಸೃಷ್ಟಿಯಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಚಳಿಗಾಲದ ಅವಧಿಯಲ್ಲಿ ಅತಿ ಕಡಿಮೆ ತಾಪಮಾನ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕೊರೆವ ಚಳಿ ಇಂದ ಜನರು ಬೆಚ್ಚಗಿನ ವಾತಾವರಣ ಬಯಸುತ್ತಿದ್ದಾರೆ ಹೀಗಾಗಿ ಮನೆಯಿಂದ ಹೊರಬರಲು ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇಲಾಖೆ ತಿಳಿಸಿದೆ.
ದೆಹಲಿಯ ವಿವಿಧ ಭಾಗಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗಿರುವ ಹಿನ್ನೆಲೆಯಲ್ಲಿ ಕೆಲವೆಡೆ ಮಂಜು ಮುಸುಕಿದ ವಾತಾವರಣ ಹಿಮಾಲಯದ ಪರಿಸ್ಥಿತಿಯನ್ನು ನೆನಪಿಸುವಂತಿದೆ ಎಂದು ತಿಳಿಸಿದೆ.
ಕನಿಷ್ಠ ತಾಪಮಾನದಿಂದಾಗಿ ಶೀತಗಾಳಿ ಬೀಸುತ್ತಿದ್ದು ಜನರು ಹಾಗೂ ವಾಹನ ಸಂಚಾರ ರಸ್ತೆಗಿಳಿಯಲು ಹಿಂದೇಟು ಹಾಕುತ್ತಿದ್ದಾರೆ ಕಾಣಿಸಿಕೊಂಡಿದ್ದರು ಜನರು ರಸ್ತೆಗೆ ಬರಲು ಮೀನಮೇಷ ಎಣಿಸುತ್ತಿದ್ದಾರೆ.
ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ ಹೀಗಾಗಿ ದೆಹಲಿಯ ಜನರು ಆದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಹವಾಮಾನ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದ್ದಾರೆ.
ಗಾಳಿಯ ಗುಣಮಟ್ಟ ಕುಸಿತ:
ದೆಹಲಿಯಲ್ಲಿ ಒಂದೆಡೆ ಕನಿಷ್ಠ ತಾಪಮಾನ ದಾಖಲಾಗಿದೆ ಮತ್ತೊಂದೆಡೆ ಗಾಳಿಯ ಗುಣಮಟ್ಟ ಕುಸಿದಿರುವುದು ಜನರನ್ನು ಮತ್ತಷ್ಟು ಆತಂಕಕ್ಕೆ ಮಾಡಿದೆ.
ಗಾಳಿಯ ಗುಣಮಟ್ಟ ಸೂಚ್ಯಂಕ ೨೯೦ ಇನ್ನೂ ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆಗಳಿವೆಯೆಂದು ಬಸವ ಹೇಳಿದ್ದಾರೆ
ಹಲವು ರಾಜ್ಯಗಳಲ್ಲಿ ಶೀತಗಾಳಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಣಿಸಿಕೊಂಡಿರುವ ಶೀತಗಾಳಿ ಅಕ್ಕಪಕ್ಕದ ರಾಜ್ಯಗಳಲ್ಲಿ ವ್ಯಾಪಿಸಿದೆ.
ಪಂಜಾಬ್, ಹರಿಯಾಣ, ಚಂದಿಗಡ, ಉತ್ತರಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಕಾಂಡ, ಮಧ್ಯಪ್ರದೇಶ, ಛತ್ತಿಸ್ಗಢ, ಬಿಹಾರ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಶೀತಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ