ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಕೆ

ಸಂಜೆವಾಣಿ ನ್ಯೂಸ್
ಮೈಸೂರು.ಮೇ.17:- ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಆಶೋಕ್, ಬಿಎಸ್ ವೈ ಪುತ್ರ ಬಿ.ವೈ.ರಾಘವೇಂದ್ರ, ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಶಾಸಕರಾದ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮುಡಾ ಮಾಜಿ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಸೇರಿ ಅನೇಕರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಟಿಕೆಟ್ ಗೊಂದಲ ವಿಚಾರವಾಗಿ ಪ್ರತಿಕ್ರಯಿಸಿ, ಶ್ರೀಕಂಠೇಗೌಡ ಜನತಾ ಪಕ್ಷದ ಕಟ್ಟಾಳು. ದೇವೇಗೌಡರು, ಕುಮಾರಸ್ವಾಮಿಯ ಅಪ್ಪಟ ಶಿಷ್ಯ. ಶ್ರೀಕಂಠೇಗೌಡರ ಮುಂದಾಳತ್ವದಲ್ಲಿಯೆ ಈ ಚುನಾವಣೆ ನಡೆಯತ್ತೆ. ಯಾರು ಅನುಮಾನ ಪಡುವ ಅಗತ್ಯವಿಲ್ಲ. ವಿಜಯೇಂದ್ರ ಅವ್ರು ಬರಬೇಕಿತ್ತು. ಅನಿವಾರ್ಯ ಕಾರಣದಿಂದ ಬಂದಿಲ್ಲ. ರಾಘವೇಂದ್ರ, ಆರ್.ಅಶೋಕ್ ಅವರೊಟ್ಟಿಗೆ ನಾಮಪತ್ರ ಸಲ್ಲಿಸಿದ್ದೇವೆ. ಸಣ್ಣ ವ್ಯತ್ಯಾಸದಿಂದ ಬಿಜೆಪಿ ನಿಂಗರಾಜ್ ಗೌಡಗೆ ಟಿಕೆಟ್ ಘೋಷಣೆ ಆಗಿತ್ತು ಅಷ್ಟೇ. ಈಗ ವಿವೇಕನಂದ ಪರ ಎಲ್ಲರೂ ಕೆಲಸ ಮಾಡುತ್ತಾರೆ. ಶ್ರೀಕಂಠೇಗೌಡರೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಚುನಾವಣೆಯಲ್ಲಿ ವಿವೇಕಾನಂದರನ್ನು ಗೆಲ್ಲಿಸುತ್ತಾರೆ ಎಂದು ಹೇಳಿದರು.
ಪ್ರಜ್ವಲ್ ಎಲ್ಲಿದ್ದಾರೆ ಗೊತ್ತಿಲ್ಲ: ಪ್ರಜ್ವಲ್ ರೇವಣ್ಣ ನಾಪತ್ತೆ ವಿಚಾರವಾಗಿ ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಯಿಸಿ, ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಗೊತ್ತಿಲ್ಲ. ಕುಟುಂಬಸ್ಥರ ಸಂಪರ್ಕಕ್ಕೂ ಸಿಕ್ಕಿಲ್ಲ. ರಾಜ್ಯ ಸರ್ಕಾರವೇ ಬ್ಲೂ ಕಾರ್ನರ್ ನೋಟಿಸ್ ನೀಡಿದೆ.
ಎಸ್ ಐಟಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.
ಸಿಎಂ ಈಗಾಗಲೇ ಹೇಳಿದ್ದಾರೆ ಈ ಕೇಸ್ ಸಿಬಿಐ ವಹಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಬಂಧಿಸಿದ್ದ ವಿರುದ್ಧ ಪ್ರತಿಭಟನೆ ಮಾಡಿದ್ದೆವು. ಪ್ರಜ್ವಲ್ ರೇವಣ್ಣ ಪರವಾಗಿ ನಾವು ಪೆÇ್ರಟೆಸ್ಟ್ ಮಾಡಿಲ್ಲ. ತಮಿಳುನಾಡು ಸೇರಿ ಇತರೆ ಕಡೆ ಪೆನ್ ಡ್ರೈವ್ ತಯಾರಿಸಿದ್ದರು ಅಂತ ಸಿಬಿಸಿ ಗೆ ಈ ಕೇಸ್ ಕೊಡಿ ಅಂತ ಹೇಳಿದ್ದೇವೆ. ಎಸ್‍ಐಟಿ ಅಧಿಕಾರಿಗಳು ತನಿಖೆ ಮಾಡಿ ಸತ್ಯಾಸತ್ಯತೆ ಬಯಲಿಗೆ ತರುತ್ತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದರು.