ಮೈದುಂಬಿದ ವಿವಿ ಸಾಗರ ಜಲಾಶಯಕ್ಕೆ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ

ಚಿತ್ರದುರ್ಗ.ನ.೨೩;ಬಯಲು ಸೀಮೆಯ ಭಾಗೀರಥಿ ಎನಿಸಿದ ವೇದಾವತಿ ನದಿ ಮೈದುಂಬಿ ಹರಿದಿದ್ದಾಳೆ. ಮಧ್ಯ ಕರ್ನಾಟಕದ ಜೀವನಾಡಿ ವಾಣಿ ವಿಲಾಸಸಾಗರ ಜಲಾಶಯ ಭರ್ತಿಯಾಗಿ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಸಂದರ್ಭವನ್ನು ಐತಿಹಾಸಿಕವಾಗಿಸುವ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಭರ್ತಿಯಾಗಿರುವ ವಿ.ವಿ.ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,  ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಪೂರ್ಣಿಮಾ ಶ್ರೀನಿವಾಸ, ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಶಿರಾ ಶಾಸಕ ರಾಜೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಎಸ್.ನವೀನ್, ರವಿಕುಮಾರ್, ಜಿ.ಪಂ ಸಿಇಓ ಎಂ.ಎಸ್.ದಿವಾಕರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಪೊಲೀಸ್ ವರಿμÁ್ಠಧಿಕಾರಿ ಕೆ.ಪರುಶುರಾಮ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ರೈತ ಸಂಘದ ಮುಖಂಡರುಗಳು, ರೈತಬಾಂಧವರು ಉಪಸ್ಥಿತರಿದ್ದರು.