
ಬೀದರ್ :ಮೇ.20: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿರುವ ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ನೂತನ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರ ಭೇಟಿ ನೀಡಿದರು.
ಬೀದರ್ ದಕ್ಷಿಣ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಪಕ್ಷದ ಮುಖಂಡರೊಂದಿಗೆ ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮೈಲಾರ ಮಲ್ಲಣ್ಣ ದೇವರ ಆಶೀರ್ವಾದಿಂದ ನಾನು ಶಾಸಕನಾಗಿ ಬೀದರ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡುವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ನಾಗಭೂಷಣ ಕಮಠಾಣ, ಅಶೋಕ ಪಾಟೀಲ, ಸಂತೋಷ ಮನ್ನಾಎಖೇಳ್ಳಿ, ಶಿವಕುಮಾರ ಪಾಟೀಲ, ಮಲ್ಲಿಕಾರ್ಜುನ್ ಚಿಟ್ಟಾ ಮತ್ತಿತರರು ಉಪಸ್ಥಿತರಿದ್ದರು.