ಮೈಸೂರಿಗೆ ಮಹಾರಾಜ, ಚಾಮರಾಜನಗರಕ್ಕೆ ಬಾಲರಾಜ: ದಯಾನಂದ ಪಾಟೀಲ್

ಸಂಜೆವಾಣಿ ವಾರ್ತೆ
ಚಾಮರಾಜನಗರ. ಏ. 07- ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಯದುವೀರ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎಸ್. ಬಾಲರಾಜು ಅವರು ಜಯ ಗಳಿಸಲಿದ್ದಾರೆ. ಹೀಗಾಗಿ ಮೈಸೂರಿಗೆ ಮಹಾರಾಜು, ಚಾ.ನಗರಕ್ಕೆ ಬಾಲರಾಜರನ್ನು ಗೆಲ್ಲಿಸಿ ಸಂಸತ್‍ಗೆ ಕಳುಹಿಸಿಕೊಡಿ ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲಾ ವಕ್ತಾರ ದಯಾನಂದ ಪಾಟೀಲ್ ಮನವಿ ಮಾಡಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಅವರು ಅಲೆ ಇದೆ. ಮತ್ತೆ ಮೋದಿ ಅವರೇ ಪ್ರಧಾನಿಯಾಗಬೇಕೆಂದು ಯುವ ಜನಾಂಗ, ಮಹಿಳೆಯರು ಹಾಗು ಪ್ರಬುದ್ದ ಮತದಾರರು ನಿಶ್ಚಯ ಮಾಡಿದ್ದಾರೆ. ಹೀಗಾಗಿ 400ಕ್ಕು ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 10 ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಭಿವೃದ್ಧಿಯತ್ತ ಕೊಂಡೊಯ್ಯು ತ್ತಿದ್ದಾರೆ 2014 ರ ನಂತರ ಬಂದ ಮೋದಿ ಸರ್ಕಾರ ದೇಶದಲ್ಲಿ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರು ಪೂರೈಕೆ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ಮಾಡಿದೆ. ಆದರೆ, ಸಿದ್ದರಾಮಯ್ಯ ಅವರು ಎಸ್ಸಿ, ಎಸ್ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ದೂರಿದರು.
ದೇಶದಲ್ಲಿ 10 ಕೋಟಿ ಸಿಲಿಂಡರ್ ವಿತರಣೆ, ಜಲಜೀವನ್ ಮಿಷನ್ ಯೋಜನೆಯಡಿ 14 ಕೋಟಿ ಜನರಿಗೆ ಕುಡಿಯುವ ನೀರು, 12 ಕೋಟಿ ಶೌಚಾಲಯಗಳ ನಿರ್ಮಾಣ ಮಾಡಿದೆ. ಈ ಬಾರಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರಕ್ಕೆ ಬರುತ್ತದೆ ಎಂದರು.
ಶೇ.33 ಮಹಿಳೆಯರಿಗೆ ಶಾಸಕಾಂಗ ಅಸೆಂಬ್ಲಿಯಲ್ಲಿ ಮೀಸಲಾತಿ ನೀಡಲಾಗಿದೆ. ಅಲ್ಲದೇ ತ್ರಿವಳಿ ತಲಾಖ್ ನಿμÉೀಧದ ಮೂಲಕ ಮುಸ್ಲಿಂ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಪಿಎಂ ಮುದ್ರಾ ಯೋಜನೆಯಡಿ ಮಹಿಳೆಯರಿಗೆ 31 ಕೋಟಿ ರೂ. ಮಂಜೂರು ಮಾಡಲಾಗಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದೆ ಎಂದು ಸವಿಸ್ತಾರವಾಗಿ ಪಾಟೀಲ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಶಿವರುದ್ರಸ್ವಾಮಿ, ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಸಹ ವಕ್ತಾರ ಎನ್.ಮಂಜುನಾಥ್, ಜಿಲ್ಲಾ ಮಾಧ್ಯಮ ಸಂಚಾಲಕ ವೀರೇಂದ್ರ, ಸಹ ಸಂಚಾಲಕ ಅಶ್ವಿನ್ ಇದ್ದರು.
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ವಕ್ತಾರ ದಯಾನಂದ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.