ಮೈಸೂರಿನಲ್ಲಿ ಅಂಗಡಿ ಮುಂಗಟ್ಟುಗಳ ಬಂದ್

ಮೈಸೂರು: ಏ.22: ಮೈಸೂರಿನಲ್ಲಿ ಕೋವಿಡ್ ಹೆಚ್ಚಳವಾಗಿತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್, ಬೇಕರಿ ಸೇರಿದಂತೆ ದಿನಬಳಕೆ ವಸ್ತು, ದಿನಸಿ ಅಂಗಡಿಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಯಿತು.
ಮೇ 4ರ ವರಗೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡುವಂತೆ ವ್ಯಾಪಾರಿಗಳಿಗೆ ಪೆÇಲೀಸ್ ಇಲಾಖೆಯಿಂದ ಸೂಚನೆ ನೀಡಿದ ಹಿನ್ನಲೆಯಲ್ಲಿ ಹೇರ್ ಸಲೂನ್, ಬ್ಯುಟಿ ಪಾರ್ಲರ್ ಗಳು ವೀಕೆಂಡ್ ಕಫ್ರ್ಯೂ ನಲ್ಲಿ ಕಾರ್ಯನಿರ್ವಹಿಸುವಂತಿಲ್ಲ. ಬಾರ್. ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಪಾರ್ಸಲ್ ಕಡ್ಡಾಯವಾಗಿರುತ್ತದೆ.
ನಗರದಲ್ಲಿ ಇಂದು ಹೋಟೆಲ್, ಬೇಕರಿಗಳು (ಪಾರ್ಸೆಲ್ ಮಾತ್ರ), ದಿನಸಿ ಅಂಗಡಿ, ಔಷಧ ಅಂಗಡಿ, ಎಲೆಕ್ಟ್ರಿಕ್ ವಸ್ತುಗಳು, ಕಟ್ಟಡ ಸಾಮಗ್ರಿಗಳ ಅಂಗಡಿಗಳನ್ನು ಹೊರತುಪಡಿಸಿ ಇತರೆ ಅಂಗಡಿಗಳನ್ನು ಪೆÇಲೀಸರು ಮುಚ್ಚಿಸಿದರು.
ಅರಸು ರಸ್ತೆಯಲ್ಲಿ ತೆರೆದಿದ್ದ ವಾಣಿಜ್ಯ ಮಳಿಗೆಗಳನ್ನು ಸಹ ಪೆÇಲೀಸರು ಬಂದ್ ಮಾಡಿದರು. ಬಾರ್. ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಪಾರ್ಸಲ್ ಕಡ್ಡಾಯ.
ನಾಳೆ ಸಂಜೆ 6ಗಂಟೆಯಿಂದ ಸೋಮವಾರ ಬೆಳಗ್ಗೆ 6ರ ವರಗೆ ವೀಕೆಂಡ್ ಕಫ್ರ್ಯೂ. ಮೆಡಿಕಲ್, ಮಾಂಸದಂಗಡಿ, ತರಕಾರಿ, ಹಣ್ಣು ಖರೀದಿಸುವವರಿಗೆ ಮಾತ್ರ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಕಾಲಾವಕಾಶ. ಮಾಂಸ ಮಾರಾಟಗಾರರು ಅಗತ್ಯಕ್ಕೂ ಹೆಚ್ಚು ಮಾಂಸ ಮಾರಾಟಕ್ಕೆ ಮುಂದಾಗಬಾರದು. ಕೇವಲ ನಿಗದಿತ ಸಮಯಕ್ಕಾಗುವಷ್ಟು ಮಾಂಸ ಮಾರಾಟಕ್ಕೆ ಮುಂದಾಗಿ. ಅನಗತ್ಯ ಮಾಂಸ ಮಾರಾಟ ಮಾಡುವ ಮೂಲಕ ನಷ್ಟ ಅನುಭವಿಸದಿರಿ ಎಂದು ಡಿಸಿಪಿ ಪ್ರಕಾಶ್ ಗೌಡ ಸಲಹೆ ನೀಡಿದ್ದಾರೆ.
ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ ಎಂದು ಡಿಸಿಪಿ ಪ್ರಕಾಶ್‍ಗೌಡ ತಿಳಿಸಿದ್ದಾರೆ.