ಮೈಸೂರಿನಲ್ಲಿ ಮೇ.29ರಿಂದ ಜೂ.7ರವರೆಗೆ ಸಂಪೂರ್ಣ ಲಾಕ್‍ಡೌನ್

ಎರಡು ದಿನ ಮಾತ್ರ ದಿನಸಿ ಖರೀದಿಗೆ ಅವಕಾಶ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು,ಮೇ.27:- ಲಾಕ್ ಡೌನ್ ಇದ್ದಾಗ್ಯೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಮೇ.29ರಿಂದ ಜೂನ್ 7ರವರೆಗೆ ವಾರದಲ್ಲಿ ಎರಡು ದಿನಗಳು ಮಾತ್ರ ದಿನಸಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಆದೇಶದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ -19 ಸೋಂಕು ಹರಡುವಿಕೆ ಸರಪಳಿಯನ್ನು ಮುರಿಯುವ ಹಾಗೂ ಸೋಂಕು ನಿಯಂತ್ರಿಸುವ ಸಂಬಂಧ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ವಯ ಕ್ರಮಗಳನ್ವಯ ಕ್ರಮಗಳನ್ನು ಜರುಗಿಸಿದ್ದರೂ ಸಹ ಪ್ರತಿದಿನ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾ ಟಾಸ್ಕ್ ಪೆÇೀರ್ಸ್ ಸಮಿತಿಯ ಸದಸ್ಯರು ಹಾಗೂ ತಾಲೂಕು ಟಾಸ್ಕ್ ಪೆÇೀರ್ಸ್ ಸಮಿತಿಯ ಅಭಿಪ್ರಾಯಗಳನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಂದ ಪಡೆಯಲಾಗಿದೆ ಎಂದಿದ್ದಾರೆ.
ಸರ್ಕಾರದ ಮಾರ್ಗಸೂಚಿಗಳೊಂದಿಗೆ ಹೆಚ್ಚುವರಿಯಾಗಿ ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅತ್ಯಗತ್ಯ ಸೇವೆ ಹೊರತುಪಡಿಸಿ ಉಳಿದ ಚಟುವಟಿಕೆಗಳನ್ನು ನಿರ್ಬಂಧಿಸುವುದು ಅಗತ್ಯವೆಂದು ಅಭಿಪ್ರಾಯವನ್ನು ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಸೇವೆಗಳು ಹಾಗೂ ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸುವುದು ಸೂಕ್ತವೆಂದು ಮನವರಿಕೆಯಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯ ಹಿತದೃಷ್ಟಿಯಿಂದ ಕೊರೋನಾ ವೈರಸ್ ನ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಡಿಸಸ್ಟರ್ ಮ್ಯಾನೇಜ್ ಮೆಂಟ್ ಆ?ಯಕ್ಟ್ 2005ರ ಸೆಕ್ಷನ್ 24ರಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಮೇ.29ರಂದು ಜಾರಿಗೆ ಬರುವಂತೆ ಜೂನ್ 7ರವರೆಗೆ ಬೆಳಿಗ್ಗೆ 6ಗಂಟೆಯಿಂದ ವಾರದ ಎರಡು ದಿನಗಳು ಅಂದರೆ ಸೋಮವಾರ ಮತ್ತು ಗುರುವಾರಗಳಂದು ಸರ್ಕಾರದ ಉಲ್ಲೇಖ(2) ಮತ್ತು (3) ರ ಮಾರ್ಗಸೂಚಿಯಲ್ಲಿ ವಿವರಿಸಿರುವ ಚಟುವಟಿಕೆಗಳಿಗೆ ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 12ಗಂಟೆಯವರೆಗೆ ಮಾತ್ರ ಅನುಮತಿ ನೀಡಿ ಬ್ಯಾಂಕ್ ಭಾರತೀಯ ವಿಮಾ ಯೋಜನೆಗಳ ವ್ಯವಹಾರಗಳನ್ನು ಈ ದಿನಗಳಂದು ಮಾತ್ರ ಬೆಳಿಗ್ಗೆ 8ರಿಂದ 12ಗಂಟೆಯವರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಸ್ಟಾಂಡ್ ಅಲೋನ್ ಹಾಲಿನ ಬೂತ್ ಗಳು, ವೈದ್ಯಕೀಯ ಸೇವೆಗಳು, ಹಾಪ್ ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು ಹಾಗೂ ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಚೇಧಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಸರಕು ಸಗಟು ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನ ಸಂಚಾರ ಹಾಗೂ ವ್ಯಕ್ತಿಗಳ ಓಡಾಟ ಕಂಡು ಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಉಪಬಂಧಗಳು ಹಾಗೂ ಭಾರತೀಯ ದಂಡ ಸಂಹಿತೆಯ ಅನುಚ್ಛೇದ 188ರಡಿಯಲ್ಲಿ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ವಹಿಸಲಾಗುವುದು. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.