ಮೈಸೂರು-ಬೆಂಗಳೂರು ಒಡೆಯರ್ ಹೆಸರಿಡಲು ಮನವಿ

ಬೆಂಗಳೂರು, ಜನವರಿ ೨: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಗೆ ಇಡಬೇಕೆಂದು ಒತ್ತಾಯಿಸಿದ್ದಾರೆ.
ಜನವರಿ ೧ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ತಮ್ಮ ಪ್ರತ್ಯೇಕ ಪತ್ರಗಳಲ್ಲಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕರುಣಾಮಯಿ ರಾಜರು, ತಮ್ಮ ಆಡಳಿತ ಸುಧಾರಣೆಗಳು ಮತ್ತು ಸಾಧನೆಗಳಿಗಾಗಿ ಮಹಾತ್ಮಾ ಗಾಂಧಿಯವರಿಂದ ’ರಾಜರ್ಷಿ ಎಂಬ ಗೌರವವನ್ನು ಗಳಿಸಿದ್ದಾರೆ ಎಂದು ಕೃಷ್ಣ ಹೇಳಿದ್ದಾರೆ.