ಮೈಸೂರು ಮುಕ್ತ ವಿವಿಯಲ್ಲಿ ಪ್ರವೇಶಾವಕಾಶ: ಕುಲಪತಿ ಶರಣಪ್ಪ

ವಿಜಯಪುರ, ಫೆ.8:ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 34 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯೂಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ಹೀಗಾಗಿ, 10+2 (ಪದವಿ ಪೂರ್ವ), 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು ವಿಶ್ವವಿದ್ಯಾಲಯ ಕುಲಪತಿ ಪೆÇ್ರ. ಶರಣಪ್ಪ ಹಲಸೆ ತಿಳಿಸಿದರು.
ಕ.ರಾ.ಮು.ವಿ.ಯು ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಮುಕ್ತಗಂಗೋತ್ರಿಯಲ್ಲಿ ಕೇಂದ್ರ ಕಛೇರಿ ಹೊಂದಿದ್ದು, ಅತ್ಯಂತ ಸುಂದರವಾದ ಹಸಿರು ಪರಿಸರದಲ್ಲಿ ಸುಸಜ್ಜಿತ ಆಡಆತ ಭವನ, ಪರೀಕ್ಷಾ ಭವನ, ವಿಜ್ಞಾನ ಭವನ, ಗ್ರಂಥಾಲಯ, ಪ್ರಾಯೋಗಿಕ ಪ್ರಯೋಗಾಲಯವನ್ನು ಹೊಂದಿದ್ದು, ರಾಜ್ಯದಾದ್ಯಂತ 34 ಪ್ರಾದೇಶಿಕ ಕೇಂದ್ರಗಳು ಮತ್ತು 178 ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕ ವಿದ್ಯಾರ್ಥಿ ಸ್ನೇಹಿ ಶಿಕ್ಷಣ ಸೇವೆಯನ್ನು ಒದಗಿಸುತ್ತ ಬಂದಿರುತ್ತದೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕ.ರಾ.ಮು.ವಿ.ಯಲ್ಲಿ ಪದವಿ/ಸ್ನಾತಕೋತ್ತರ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಶ್ರೇಣಿಯ ಸರ್ಕಾರಿ ಹುದ್ದೆ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಎ.ಎಸ್. ಐ.ಎ.ಎಸ್. ಪೆÇಲೀಸ್ ಅಧಿಕಾರಿಗಳಾಗಿ, ಅಧ್ಯಾಪಕರಾಗಿ, ಶಿಕ್ಷಕರಾಗಿ ಕರಾಮುವಿಯ ವಿದ್ಯಾರ್ಥಿಗಳಾಗಿ ಆಯ್ಕೆಯಾಗುತ್ತಿದ್ದಾರೆ ಎಂದು ಹೇಳಿದರು.
ಕ.ರಾ.ಮು.ವಿ.ಯು ಯು.ಜಿ.ಸಿ. ಮಾನ್ಯತೆ ಪಡೆದಿರುವ 64 ಸ್ನಾತಕ/ಸ್ನಾತಕೋತ್ತರ ಪದವಿ, ಡಿಪೆÇ್ಲೀಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡುತ್ತಿದ್ದು ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ (M.S.W) ( M.C.A)(B.S.W),
ಪ್ರವಾಸೋದ್ಯಮ, ಭೂವಿಜ್ಞಾನ ಮತ್ತು ಇನ್ನಿತರೆ ಹೊಸ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಕ.ರಾ.ಮು.ವಿ.ಯಲ್ಲಿ ಪ್ರಸ್ತುತ ಒಂದು ಲಕ್ಷ ಪ್ರವೇಶಾತಿ ಸಾಧಿಸಬೇಕು ಎಂಬ ಗುರಿ ಹೊಂದಲಾಗಿದೆ ಎಂದು ಹೇಳಿದರು.
ನ್ಯಾಕ್ ನಿಂದ ಂ + ಮಾನ್ಯತೆ ಪಡೆದಿರುತ್ತದೆ.(CGPA3.31)
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 1996 ರಲ್ಲಿ ಪ್ರಾರಂಭವಾಗಿದ್ದು, ಸರ್ಕಾರ ಗೆಜೆಟ್ ಅಧಿಸೂಚನೆ ಡಿಪಿಎಎಲ್ 43 ಶಾಸನ 2020 ದಿನಾಂಕ 30-12-2020 ರ ಅನ್ವಯ ಮುಕ್ತ-ದೂರ ಶಿಕ್ಷಣ ನೀಡುವ ರಾಜ್ಯದ ಅಧಿಕೃತ ಏಕೈಕ ವಿಶ್ವವಿದ್ಯಾನಿಲಯವಾಗಿದೆ ಎಂಬುವುದು ಹೆಮ್ಮೆಯಾಗಿದೆ ಎಂದರು.
ಲ್ಯಾಟರಲ್ ಪ್ರವೇಶ ಅಥವಾ ಇತರ ಕಾಲೇಜಿನಲ್ಲಿ ಅಥವಾ ಖeguಟಚಿಡಿ ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರದಿಂದ ಓದಲು ಆಗದಿದ್ದರೆ ಅಥವಾ ಖeguಟಚಿಡಿ ಆಗಿ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸಬಹುದು ಎಂದು ತಿಳಿಸಿದರು.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿಜಯಪುರ ನಗರದಲ್ಲಿ ಜೂನ್-2023ರಲ್ಲಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ. ಈ ಕೇಂದ್ರವು ವಿ.ಎಸ್.ಜಿ.ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆವರಣ, ನಂ.680/ಇ ಆಕಾಶವಾಣಿ ಕೇಂದ್ರದ ಎದುರುಗಡೆ, ರಿಂಗ್ ರಸ್ತೆ ವಿಜಯಪುರ-586103 ಇಲ್ಲಿ ವಿಜಯಪುರ ಪ್ರಾದೇಶಿಕ ಕೇಂದ್ರ ಕಛೇರಿ ಆರಂಭಿಸಲಾಗಿದ್ದು, ನುರಿತ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳಿಗೆ ಕರಾಮುವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತಿದೆ. 2023-24 ನೇ ಸಾಲಿನ ಜುಲೈ ಆವೃತ್ತಿಯಲ್ಲಿ ಒಟ್ಟು 1096 ವಿದ್ಯಾರ್ಥಿಗಳು ಸ್ನಾತಕ ಸ್ನಾತಕೋತ್ತರ ಪದವಿ ಹಾಗೂ ಡಿಪೆÇ್ಲೀಮಾ ಕಾರ್ಯಕ್ರಮಗಳಿಗೆ ಹೊಸದಾಗಿ ಪ್ರವೇಶಾತಿ ಹೊಂದಿರುತ್ತಾರೆ. ದ್ವಿತೀಯ ಮತ್ತು ತೃತೀಯ ವರ್ಷದ ಪ್ರವೇಶಾತಿಗೂ ಕೂಡ ನವೀಕರಣಗೊಂಡಿರುತ್ತಾರೆ. ಪ್ರಸ್ತುತ 2024 ರ ಜನವರಿಗೆ ವಿಜಯಪುರ ಜಿಲ್ಲೆಯಾದ್ಯಾಂತ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುತ್ತಿದ್ದಾರೆ. ಕರಾಮುವಿ ವಿಜಯಪುರ ಪ್ರಾದೇಶಿಕ ಕೇಂದ್ರವು ಉನ್ನತ ಶಿಕ್ಷಣವನ್ನು “ಮನೆಯೇ ಪಾಠಶಾಲೆ” ಎಂಬ ಧ್ಯೇಯ ವಾಕ್ಯದೊಂದಿಗೆ ದೂರಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ದೂರಶಿಕ್ಷಣ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದರು.
ವಿಜಯಪುರ ಪ್ರಾದೇಶಿಕ ಕೇಂದ್ರ ನಿರ್ದೇಶಕಿ ಮೈತ್ರಿ ಡಿ.ಎಸ್., ಧಾರವಾಡ ಪ್ರಾದೇಶಿಕ ಕೇಂದ್ರದ ನಿರ್ದೇಶಕ ರಾಘವೇಂದ್ರ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.