
ಭಾಲ್ಕಿ:ಆ.19: ಮಕ್ಕಳಲ್ಲಿಯ ಪೌಷ್ಠಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ, 2023-24 ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಇದುವರೆಗೆ 1 ರಿಂದ 8ನೇ ತರಗತಿಯೆ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ, ಬಾಳೆಹಣ್ಣು ಮತ್ತು ಶೆಂಗಾ ಚಿಕ್ಕಿಗಳನ್ನು 9 ಮತ್ತು 10 ನೇ ತರಗತಿಯ ಮಕ್ಕಳಿಗೆ ವಿಸ್ತರಿಸಲಾಗಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ ಹೇಳಿದರು.
ತಾಲೂಕಿನ ಖಟಕ ಚಿಂಚೋಳಿ ಗ್ರಾವ್ಮದ ಸರ್ಕಾರಿ ಪ್ರೌಢಶಾಲೆಯಲ್ಲಿ, ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿದೇರ್ಶಕರ ಕಾರ್ಯಾಲಯದ ವತಿಯಿಂದ ಆಯೋಜಿಸಿದ್ದ ಯೋಜನೆ ವಿಸ್ತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿದೇರ್ಶಕ ಮಲ್ಲಿನಾಥ ಸಜ್ಜನ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇವೇಳೆ ಎಲ್ಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿಗಳನ್ನು ನೀಡಿ ಸತ್ಕರಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸಂಗೀತಾ ಚನಶೆಟ್ಟಿ, ಉಪಾಧ್ಯಕ್ಷ ಸಂಜೀವಕುಮಾರ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ದಿಲೀಪ ಸಂತಪೂರೆ, ಎಸ್.ಡಿ.ಎಮ್.ಸಿ ಅಧ್ಯಕ್ಷ ಜಯರಾಜ, ಮುಖ್ಯ ಶಿಕ್ಷಕ ರಾಜಕುಮಾರ ಜೋಳದಾಪಕೆ, ಉರ್ದು ಶಾಲೆಯ ಮುಖ್ಯ ಶಿಕ್ಷಕ ಫಯಾಜ್, ಸಿಆರ್‍ಪಿ ಚನಪ್ಪಾ ತಳವಾಡೆ, ಮಾರುತಿ, ರಾಜಕುಮಾರ, ಉಸ್ಮಾನಲಿ, ಪ್ರೌಢ ಶಾಲೆ ಶಿಕ್ಷಕರು ಉಪಸ್ಥಿತರಿದ್ದರು. ದೇವಿದಾಸ ಮೇತ್ರೆ ಸ್ವಾಗತಿಸಿದರು. ಕುಪೇಂದ್ರ ಜಗಶೆಟ್ಟಿ ನಿರೂಪಿಸಿದರು. ಅವಿನಾಶ ವಂದಿಸಿದರು.