ಮೊಡವೆ ಹಿನ್ನೆಲೆ: ಬಾಲಕಿ ಆತ್ಮಹತ್ಯೆ

ಪುತ್ತೂರು, ಜ.೫- ಬಾಲಕಿಯು ತನ್ನ ಮುಖದಲ್ಲಿ ಮೊಡವೆಯಿದೆ ಎಂಬ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಪಾಲ್ತಾಡಿಯಲ್ಲಿ ಈ ದುರಂತ ಘಟನೆ ನಡೆದಿದೆ.
ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿನಿಯಾಗಿರುವ ದಿವ್ಯಾ (೧೫) ಮೊಡೆವೆಯಿದೆ ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ದಿವ್ಯಾ ಮುಖದಲ್ಲಿ ಮೊಡವೆಗಳು ಕಾಣಿಸಿಕೊಂಡಿದ್ದರಿಂದ ತುಂಬಾ ದುಃಖಿತಳಾಗಿದ್ದಳು ಎನ್ನಲಾಗಿದೆ. ಅದೇ ಕಾರಣದಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ವರದಿಯಾಗಿದೆ. ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಗುಡ್ಡೆಯಲ್ಲಿ ಬಾಲಕಿ ನೇಣಿಗೆ ಶರಣಾಗಿದ್ದಾರೆ.