ಮೊದಲೆರಡು ಪಂದ್ಯಗಳಿಗೆ ಕೆ.ಎಲ್. ರಾಹುಲ್ ನಾಯಕ ಆಸೀಸ್ ವಿರುದ್ಧ ಒಡಿಐ ಸರಣಿ

ಮುಂಬೈ, ಸೆ.೧೮- ಸ್ವದೇಶದಲ್ಲೇ ನಡೆಯಲಿರುವ ವಿಶ್ವಕಪ್ ಕ್ರಿಕೆಟಿಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೆ ಎರಡು ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಮೊದಲ ಎರಡು ಏಕದಿನ ಕ್ರಿಕೆಟ್ ಪಂದ್ಯಗಳಿಗೆ ಲೋಕೇಶ್ ರಾಹುಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಮೂರನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ತಂಡ ಪ್ರಕಟಿಸಲಾಗಿದೆ.
ಐಪಿಎಲ್ ನಲ್ಲಿ ಗಾಯಾಳುವಾಗಿ ಚೇತರಿಸಿಕೊಂಡ ಏಷ್ಯಾಕಪ್ ಟೂರ್ನಿಗೆ ವಾಪಸ್ಸಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಇದೇ ವೇಳೆ ಗಾಯಾಳುವಾಗಿರುವ ಅಕ್ಷರ್ ಪಟೇಲ್ ಅವರ ಬದಲಿಗೆ ಆರ್.ಅಶ್ವಿನ್ ಅವಕಾಶ ನೀಡಲಾಗಿದೆ.
ಟೆಸ್ಟ್ ಕ್ರಿಕೆಟ್‌ನ ನಂ.೧ ಬೌಲರ್ ರವಿಚಂದ್ರನ್ ಅಶ್ವಿನ್‌ಗೆ ತಂಡದಲ್ಲಿ ಬಹಳ ಸಮಯದಿಂದ ಸ್ಥಾನವೇ ಸಿಕ್ಕಿರಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಅವರನ್ನು ಆಡಿಸಿರಲಿಲ್ಲ.
೨೦೨೨ರ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಶ್ವಿನ್ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಈಗ ಆಸಿಸ್ ಸರಣಿಗೆ ೩ನೇ ಬೌಲರ್ ಆಗಿ ಸೇರ್ಪಡೆಗೊಂಡಿದ್ದಾರೆ.
ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಮತ್ತು ಕುಲ್ದೀಪ್ ಯಾದವ್ ಅವರಿಗೆ ವಿಶ್ವಕಪ್ ಹಿನ್ನೆಲೆಯಲ್ಲಿ ವಿಶ್ರಾಂತಿ ಕೊಡಲಾಗಿದೆ. ಆದರೆ ಕೊನೆಯ ಏಕದಿನ ಪಂದ್ಯದ ವೇಳೆಗೆ ಈ ಇಬ್ಬರು ಆಟಗಾರರು ತಂಡಕ್ಕೆ ಮರಳಲಿದ್ದಾರೆ.
ಏಷ್ಯಾಕಪ್‌ಗೆ ಅಚ್ಚರಿಯ ಆಯ್ಕೆ ಆಗಿದ್ದ ತಿಲಕ್ ವರ್ಮಾಗೆ ಆಸಿಸ್ ಸರಣಿಯಲ್ಲಿ ಆಡಲು ಅವಕಾಶ ಸಿಕ್ಕಿದೆ. ಏಷ್ಯಾಕಪ್ ನಲ್ಲಿ ಬಾಂಗ್ಲಾ ವಿರುದ್ಧದ ಔಪಚಾರಿಕ ಪಂದ್ಯದಲ್ಲಿ ತಿಲಕ್ ವರ್ಮಾ ಪಾದಾರ್ಪಣೆ ಮಾಡಿದ್ದರು. ಆದರೆ ಉತ್ತಮ ಪ್ರದರ್ಶನ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಈಗ ಮಧ್ಯಮ ಅಥವಾ ಕೆಳ ಕ್ರಮಾಂಕದಲ್ಲಿ ತಿಲಕ್ ಸ್ಥಾನ ಪಡೆಯಲಿದ್ದಾರೆ.
ಎರಡು ಪಂದ್ಯಗಳಿಗೆ ತಂಡ: ಕೆಎಲ್ ರಾಹುಲ್ (ನಾಯಕ, ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

೩ನೇ ಪಂದ್ಯಕ್ಕೆ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್*, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ
ಮೊದಲ ಏಕದಿನ ಪಂದ್ಯ ಸೆ.೨೨ ಮೊಹಾಲಿ
ಎರಡನೇ ಏಕದಿನ ಪಂದ್ಯ ಸೆ. ೨೪ ಇಂದೋರ್
ಮೂರನೇ ಏಕದಿನ ಪಂದ್ಯ ಸೆ.೨೭ ರಾಜ್‌ಕೋಟ್