ಮೊದಲ ಬಾರಿಗೆ ಮಹಿಳಾ ಪಿಎಸ್ಐ ಆಗಿ ಗೀತಾಂಜಲಿ ಸಿಂಧೆ


ಸಂಜೆ ವಾಣಿ ವಾರ್ತೆ
ಕೊಟ್ಟೂರು, ಜು.26: ಮೊದಲ ಬಾರಿಗೆ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಆಗಿ ಗೀತಾಂಜಲಿ ಶಿಂಧೆ ಅಧಿಕಾರ ವಹಿಸಿಕೊಂಡರು. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ವಿಜಯ ಕೃಷ್ಣ ಅಧಿಕಾರವನ್ನು ಹಸ್ತಾಂತರಿಸಿದರು. ಗೀತಾಂಜಲಿ ಸಿಂಧೆ ಅವರನ್ನು ಸಿಬ್ಬಂದಿ  ಸ್ವಾಗತ ಕೋರಿ, ನಂತರ ವಿಜಯಕೃಷ್ಣ ಅವರಿಗೆ ಬೀಳ್ಕೊಡುಗೆ ನೀಡಿದರು.
 ಗೀತಾಂಜಲಿ ಸಿಂಧೆ ಈ ಹಿಂದೆ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಕೊಟ್ಟೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದರು.