ಮೊಬೈಲ್ ಕಳವು ಮೂವರು ಸೆರೆ

ಬೆಂಗಳೂರು, ಜ.೧೧-ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಕಲಾಸಿಪಾಳ್ಯ ಪೊಲೀಸರು, ೪೧ ಸಾವಿರ ರೂ.ಮೌಲ್ಯದ ೧೧ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಶಬಾಜ್, ಇರ್ಫಾನ್ ಖಾನ್ ಹಾಗೂ ಹಿಮಾತ್ ಶರೀಫ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕಳೆದ ಜನವರಿ ೯ರಂದು ರಾತ್ರಿ ಕಲಾಸಿಪಾಳ್ಯ ಕೆ.ಎಂ.ರಸ್ತೆಯಲ್ಲಿ ಪೊಲೀಸರು ಗಸ್ತಿನಲ್ಲಿದ್ದಾಗ ಇಬ್ಬರು ಕಳ್ಳರು ಕದ್ದ ಮೊಬೈಲ್ ಫೋನ್ ಗಳನ್ನು ಮಾರಾಟ ಮಾಡಲು ಬಂದಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿದೆ.
ತಕ್ಷಣ ಕಲಾಸಿಪಾಳ್ಯ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಾಂತ್ ಎಲ್.ಟಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅವರು ನೀಡಿದ ಮಾಹಿತಿ ಮೇರೆಗೆ ೪೧,೦೦೦ ರೂ. ಬೆಲೆ ಬಾಳುವ ವಿವಿಧ ಕಂಪನಿಯ ೧೧ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.