ಮೊರಾರ್ಜಿ ಖಾಲಿ ಸ್ಥಾನಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮಾನ್ವಿ,ಜೂ.೨೯-
ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿರುವ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಆದರ್ಶ ವಿದ್ಯಾಲಯದ ೭, ೮ ಮತ್ತು ೯ನೇ ತರಗತಿಯಲ್ಲಿನ ಖಾಲಿ ಸ್ಥಾನಗಳ ಭರ್ತಿಗೆ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜುಲೈ ೧೦ರವರೆಗೆ ಆದರ್ಶ ವಿದ್ಯಾಲಯದಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು .ಅರ್ಜಿ ಸಲ್ಲಿಸಲು ಜುಲೈ ೧೦ರ ಸಂಜೆ ೫:೦೦ ಗಂಟೆಗೆ ಕೊನೆಯ ದಿನ ಆಗಿರುತ್ತದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನೀರಮಾನ್ವಿಯಲ್ಲಿನ ಆದರ್ಶ ವಿದ್ಯಾಲಯದಲ್ಲಿ ಜುಲೈ ೧೮ರಂದು ಬೆಳಗ್ಗೆ ೧೧ ಗಂಟೆಯಿಂದ ೧:೩೦ರ ವರೆಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ, ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರನ್ನು ೯೯೪೫೫೪೨೬೮೧ ಸಂಪರ್ಕಿಸಲು ತಿಳಿಸಿದ್ದಾರೆ.