ಮೊರಾರ್ಜಿ ದೇಸಾಯಿ ವಸತಿ ನಿಲಯ ಶಾಲೆಗಳಿಗೆ ಬೇಟಿ

ಹನೂರು: ಮೇ.02: ಇಲ್ಲಿನ ಏಕಲವ್ಯ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ನಿಲಯ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶನಿವಾರ ಬೇಟಿ ನೀಡಿ ಕೋವಿಡ್ ಐಸೋಲೇಷನ್ ಹಾಗೂ ಕೋವಿಡ್ ಸೆಂಟರ್ ತೆರೆಯುವ ಸಂಬಂಧ ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳುತ್ತಿರುವ ಸಂಬಂಧ ಜಿಲ್ಲೆಯ ಆಯಾ ತಾಲ್ಲೂಕುಗಳಲ್ಲಿ ಮುಂಜಾಗ್ರತ ಕ್ರಮವಾಗಿ ಕೊವೀಡ್-19 ಕೇಂದ್ರಗಳನ್ನು ತೆರೆಯುವ ಸಲುವಾಗಿ ಸ್ಥಳಗಳನ್ನು ಪರಿಶೀಲನೆ ನಡೆಸಿದ ಅವರು ಅಂದಾಜು 250 ಬೆಡ್‍ಗಳನ್ನು ಸಿದ್ದಪಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು ಅಲ್ಲದೇ ಇಲ್ಲಿ ದಾಖಲಾಗುವ ಸೋಂಕಿತರಿಗೆ ಯಾವುದೇ ರೀತಿಯ ಕುಂದು ಕೊರತೆಗಳು ಉಂಟಾಗದಂತೆ ಕ್ರಮ ವಹಿಸಬೇಕು. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಹೆಚ್. ನಾಗರಾಜು ತಾಲ್ಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳ, ಪ.ಪಂ. ಮುಖ್ಯಾಧಿಕಾರಿ ಮೂರ್ತಿ, ತಾಲ್ಲೂಕು ವೈಧ್ಯಾಧಿಕಾರಿ ಡಾ.ಪ್ರಕಾಶ್, ಕಂದಾಯ ಇಲಾಖೆ ಉಪ ತಹಶೀಲ್ದಾರ್ ಸುರೇಶ್, ರಾಜಸ್ವ ನಿರೀಕ್ಷಕ ಮಾದೇಶ್, ಗ್ರಾಮಲೆಕ್ಕಾಧಿಕಾರಿ ಶೇಷಣ್ಣ ಇದ್ದರು.