ಮೊರಾರ್ಜಿ ಶಾಲೆಗೆ ಡಿಸಿ ಭೇಟಿ

ಕೋಲಾರ, ಡಿ,೨೩- ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮಾಲೂರು ತಾಲ್ಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಸದರಿ ವಸತಿ ಶಾಲೆಗೆ ಈಗ ನೂತನ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ ಎಂದ ಅವರು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಅವರಿಗೆ ಅತ್ಮಸ್ಥೈರ್ಯವನ್ನು ತುಂಬಿ ಅವರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು, ಮಾಲೂರು ತಾಲ್ಲೂಕು ತಹಶೀಲ್ದಾರರು ಹಾಗೂ ಜಿಲ್ಲಾ ಸಮನ್ವಯಾಧಿಕಾರಿಗಳು ಹಾಜರಿದ್ದರು.