ಮೊಳಕಾಲ್ಮುರು: ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮೇ.೩೧; ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಸಮುದ್ರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ (ಜೆಜೆಎಂ) ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಿದ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್  ಪರಿಶೀಲಿಸಿದರು.
ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಹಾಗೂ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ನಳ ಸಂಪರ್ಕ ಕಲ್ಪಿಸಿರುವುದನ್ನು ಪರಿಶೀಲಿಸಿದರು. ನಂತರ ಗ್ರಾಮಸ್ಥರರೊಂದಿಗೆ ಚರ್ಚಿಸಿದಾಗ ಗ್ರಾಮಸ್ಥರು ಜಲಜೀವನ್ ಮಿಷನ್ ಯೋಜನೆಯಿಂದ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸಿರುವುದರಿಂದ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಹರೀಶ್ ಚಂದ್, ತಾ.ಪಂ.ಇಒ ಪ್ರಕಾಶ್, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್.ನಾಡರ್,  ಎಸ್‍ಬಿಎಂ-ಜಿ ಯೋಜನೆಯ ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.