ಮೋಕಾದಲ್ಲಿ ರಾಷ್ಟ್ರೀಯ ವಿಶ್ವ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ

ಬಳ್ಳಾರಿ ಮಾ 24 : ತಾಲೂಕಿನ ಮೋಕ ಗ್ರಾಮದಲ ಸಮುದಾಯ ಆರೋಗ್ಯ ಕೇಂದ್ರದಿಂದ ಗ್ರಾಮದ ಮಾರೆಮ್ಮ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ ರಾಷ್ಟ್ರೀಯ ವಿಶ್ವ ಕ್ಷಯರೋಗ ದಿನಾಚರಣೆ ಹಮ್ಮಿಕೊಂಡಿತ್ತು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕ್ಷಯರೋಗ ಕುರಿತು ಜನರಿಗೆ ಬೀದಿ ನಾಟಕದ ಮೂಲಕ ಅರಿವು ಮೂಡಿಸಿತು.
ಕ್ಷಯರೋಗ ನಿವಾರಣೆಗೆವಪೌಷ್ಟಿಕ ಆಹಾರ ಸೇವನೆ ಮತ್ತು ಔಷದೋಪಚಾರ ಬಗ್ಗೆ ತಿಳಿಸಿ ಕೊಡಲಾಯಿತು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಆರೋಗ್ಯ ಅಧಿಕಾರಿಗಳು (ಡಿ ಟಿ ಸಿ) ಓಬುಳರೆಡ್ಡಿ, ಬಸವರಾಜ, ಮತ್ತು ಮೋಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕುರ್ಷೀದಾ ಬೇಗಮ್, ಆರೋಗ್ಯ ಸಿಬ್ಬಂದಿ. ಗುರುಸಿದ್ದಪ್ಪ,ಇಸಾಕ್, ಗ್ರಾಮಸ್ಥರು, ಹಿರಿ-ಕಿರಿಯ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಕರೋನ್ ಮತ್ತು ಕ್ಷಯರೋಗದ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮ ಮೂಡಿಸಿದರು.