ಮೋದಿಗೆ ವಿಪಕ್ಷಗಳ ಭಯ: ಖರ್ಗೆ ವಾಗ್ದಾಳಿ

ನವದೆಹಲಿ,ಆ.೧೫- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪ್ರಸ್ತುತ ಸರಕಾರ ಪ್ರತಿಪಕ್ಷಗಳ ಭಯ ಎದುರಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ನೇರ ವಾಗ್ದಾಳಿ ನಡೆಸಿದ್ದಾರೆ.”ಪ್ರತಿಯೊಬ್ಬ ಪ್ರಧಾನಿಯೂ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿದ್ದಾರೆ. ಇಂದು ಕೆಲವರು ಭಾರತ ಕಳೆದ ಕೆಲವು ವರ್ಷಗಳಲ್ಲಿ ಮಾತ್ರ ಅಭಿವೃದ್ಧಿ ಕಂಡಿದೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ವಿರುದ್ದ ನೇರ ವಾಗ್ದಾಳಿ ನಡೆಸಿದ್ಧಾರೆ.ಪಕ್ಷದ ಅಧ್ಯಕ್ಷರಾಗಿ ಮೊದಲ ಬಾರಿಗೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.”ಮಹಾನ್ ನಾಯಕರು ಹೊಸ ಇತಿಹಾಸ ರಚಿಸಲು ಹಿಂದಿನ ಇತಿಹಾಸ ಅಳಿಸುವುದಿಲ್ಲ, ಆದರೆ ಈಗಿನ ಮಹಾನ್ ನಾಯಕರು ಎಲ್ಲವನ್ನೂ ಮರು ಹೆಸರಿಸಲು ಪ್ರಯತ್ನಿಸುತ್ತಾರೆ ಅವರು ಹಿಂದಿನ ಯೋಜನೆಗಳು, ಮೂಲಸೌಕರ್ಯ ಯೋಜನೆಗಳನ್ನು ಮರುನಾಮಕರಣ ಮಾಡಿದರು, ಅವರು ತಮ್ಮ ಸರ್ವಾಧಿಕಾರದ ಮಾರ್ಗಗಳಿಂದ ಪ್ರಜಾಪ್ರಭುತ್ವವನ್ನು ಕಿತ್ತುಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ಧಾರೆ.ದೇಶದಲ್ಲಿ ಶಾಂತಿ ಸ್ಥಾಪಿಸುವ ಹಳೆಯ ಕಾನೂನುಗಳನ್ನು ಮರುನಾಮಕರಣ ಮಾಡುತ್ತಿದ್ದಾರೆ. ಮೊದಲು ಅವರು ಅಚ್ಛೇ ದಿನ್ ಹೇಳಿದರು, ನಂತರ ನವ ಭಾರತ, ಈಗ ಅಮೃತ್ ಕಾಲ – ಅವರು ತಮ್ಮ ವೈಫಲ್ಯಗಳನ್ನು ಮರೆಮಾಚಲು ಹೆಸರುಗಳನ್ನು ಬದಲಾಯಿ ಸುತ್ತಿದ್ದಾರೆ ಎಂದು ದೂರಿದ್ದಾರೆ.ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್, ಮೌಲಾನಾ ಆಜಾದ್, ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು ಮತ್ತು ಬಿ.ಆರ್. ಅಂಬೇಡ್ಕರ್ ಅವರಂತಹ ಸ್ವಾತಂತ್ರ್ಯದ ಹೋರಾಟಗಾರಿಗೆ ಅವರು ನಮನ ಸಲ್ಲಿಸಿ ಗುಣಗಾನ ಮಾಡಿದ್ದಾರೆ.ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರ ಕಾಂಗ್ರೆಸ್ ಪ್ರಧಾನಿಗಳಾದ ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ, ಪಿ.ವಿ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರು ರಾಷ್ಟ್ರ ನಿರ್ಮಾಣದಲ್ಲಿ ನೀಡಿದ ಕೊಡುಗೆಗಳನ್ನು ಸ್ಮರಿಸಿದ್ದಾರೆ. ಇದೇ ವೇಳೆ ಬಿಜೆಪಿ ಐಕಾನ್ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಉಲ್ಲೇಖಿಸಿದ್ದಾರೆ.”ಅಟಲ್ ಬಿಹಾರಿ ವಾಜಪೇಯಿ ಜೊತೆಗೆ, ಪ್ರತಿಯೊಬ್ಬ ಪ್ರಧಾನಿಯೂ ರಾಷ್ಟ್ರದ ಬಗ್ಗೆ ಯೋಚಿಸಿದರು ಮತ್ತು ಅಭಿವೃದ್ಧಿಗೆ ಹಲವು ಕ್ರಮ ತೆಗೆದುಕೊಂಡಿದ್ದರು. ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸ್ವಾಯತ್ತ ಸಂಸ್ಥೆಗಳು ಗಂಭೀರ ಅಪಾಯದಲ್ಲಿದೆ ಎಂದಿದ್ಧಾರೆ.
ಧ್ವನಿಯನ್ನು ಹತ್ತಿಕ್ಕಲು ಹೊಸ ಸಾಧನಗಳನ್ನು ಬಳಸಲಾಗುತ್ತಿದೆ. ಪ್ರತಿಪಕ್ಷಗಳು, ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ದಾಳಿಗಳು ಮಾತ್ರವಲ್ಲದೆ, ಚುನಾವಣಾ ಆಯೋಗವನ್ನೂ ದುರ್ಬಲಗೊಳಿಸಲಾಗುತ್ತಿದೆ, ವಿರೋಧ ಪಕ್ಷದ ಸಂಸದರನ್ನು ಮೂಕವಿಸ್ಮಿತಗೊಳಿಸಲಾಗುತ್ತಿದೆ, ಅಮಾನತುಗೊಳಿಸಲಾಗುತ್ತಿದೆ ಎಂದು ದೂರಿದ್ಧಾರೆ.ಭಾರತೀಯ ತಂತ್ರಜ್ಞಾನ ಸಂಸ್ಥೆಗಳು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ), ಎಐಐಎಂಎಸ್, ಬಾಹ್ಯಾಕಾಶ ಮತ್ತು ಪರಮಾಣು ಸಂಶೋಧನೆಗಳ ರಚನೆಯನ್ನು ಪ್ರಸ್ತುತ ಸರ್ಕಾರ ದುರ್ಬಲಗೊಳಿಸಿದೆ ಎಂದು ಆರೋಪಿಸಿದ್ದಾರೆ.ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಇಂದಿರಾ ಗಾಂಧಿಯವರ ನೀತಿಗಳು ಭಾರತವನ್ನು ಆತ್ಮ ನಿರ್ಭರ್ ಆಗಲು ಸಹಾಯ ಮಾಡಿದೆ ಎಂದು ಹೇಳಿದ್ದಾರೆ.