ಮೋದಿ ಕರೆ : ಬಿಜೆಪಿಯಿಂದ ದೇವಾಲಯಗಳ ಆವರಣ ಸ್ವಚ್ಛತಾ ಕಾರ್ಯ

 ಸಂಜೆವಾಣಿ ವಾರ್ತೆ

ಶಿವಮೊಗ್ಗ, ಜ.೧೫; ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ದೇಶಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜನವರಿ 14 ರ ಭಾನುವಾರ ಬಿಜೆಪಿ ಪಕ್ಷದ ಕಾರ್ಯಕರ್ತರು ದೇವಾಲಯ ಸ್ವಚ್ಛತಾ ಕಾರ್ಯ ನಡೆಸಿದರು.ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ ಲೋಕಸಭಾ ಸದಸ್ಯಬಿ.ವೈ.ರಾಘವೇಂದ್ರ ಅವರು ದೇವಾಲಯ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.