ಮೋದಿ ಜತೆ ಓಟದ ಸ್ಪರ್ಧೆಗೆ ಸಿದ್ಧ

ಬೆಂಗಳೂರು,ಏ.೩೦-ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಿಂದ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದೇನೆಯೇ ಹೊರತು ಸಕ್ರಿಯ ರಾಜಕಾರಣದಿಂದಲ್ಲ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಸಿದ್ದರಿದ್ದರೆ ಓಟಕ್ಕೆ ನಾನು ಸಿದ್ದ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂz
ಪ್ರಶ್ನಿಸಿದ್ದಾರೆ.
ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಜನರ ಸಿಂಪತಿ ಗಿಟ್ಟಿಸುವ ಮೂಲಕ ಭಾವನಾತ್ಮಕವಾಗಿ ಜನರಲ್ಲಿ ಕಾಂಗ್ರೆಸ್ ನವರು ಮತ ಕೇಳುತ್ತಿದ್ದಾರೆ. ಆದರೆ ಮತದಾರರು ಒಬ್ಬ ಉತ್ಸಾಹಭರಿತ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತಯಾರಾಗಿದ್ದಾರೆ ಎಂದು ಪ್ರಧಾನಿ ಹೇಳಿದ್ದರು.ಅದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.