ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ನವದೆಹಲಿ,ಜೂ.೩- ಒಡಿಶಾ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಒಡಿಶಾದದ ಬಾಲಾಸೋರ್‍ನಲ್ಲಿ ರೈಲು ಅಪಘಾತವಾಗಿ ಕನಿಷ್ಠ ೩೦೦ ಮಂದಿ ಸಾವನ್ನಪ್ಪಿ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಸಿಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.
ರೈಲು ಅಪಘಾತದಲ್ಲಿ ಸುಮಾರು ೩೦೦ ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳು ದಾಖಲಾಗಿರುವ ಕಟಕ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಡಗೋವ್ ನಿಂದು ಮುಂಬೈ ನಡುವೆ ಆರಂಭವಾಗಲಿರುವ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಮುಂದೂಡಿದ್ಧಾರೆ.
ನಾಲ್ಕನೇ ದೊಡ್ಡ ದುರಂತ
ದೇಶದಲ್ಲಿ ನಡೆದ ರೈಲು ಅಪಘಾತದಲ್ಲಿ ನಾಲ್ಕನೇ ಅತಿದೊಡ್ಡ ಅಪಘಾತವಾಗಿದೆ. ಕೋಲ್ಕತ್ತಾದಿಂದ ದಕ್ಷಿಣಕ್ಕೆ ೨೫೦ ಕಿಮೀ ಮತ್ತು ಭುವನೇಶ್ವರದಿಂದ ೧೭೦ ಕಿಮೀ ಉತ್ತರಕ್ಕೆ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದ ಬಳಿ ನಿನ್ನೆ ರಾತ್ರಿ ಈ ದರುಂತ ಸಂಭಿಸಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ರೈಲು ಅಪಘಾತದ ತನಿಖೆಯನ್ನು ಆಗ್ನೇಯ ವೃತ್ತದ ಕಮಿಷನರ್ ರೈಲ್ವೇ ಸೇಫ್ಟಿ ಎಎಮ್ ಚೌಧರಿ ನೇತೃತ್ವದಲ್ಲಿ ನಡೆಸಲಾಗುವುದು ಎಂದು ಭಾರತೀಯ ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.