ಮೋದಿ ಪದಗ್ರಹಣಕ್ಕೆ ಖರ್ಗೆ

ನವದೆಹಲಿ, ಜೂ.೯- ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಜರಾಗಲಿದ್ದಾರೆ.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನೂ, ಇಂಡಿಯಾ ಬ್ಲಾಕ್ ಪಾಲುದಾರರಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ನಿನ್ನೆ ಸಭೆ ಸೇರಿದ್ದು, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ಒಪ್ಪಿಕೊಳ್ಳುವಂತೆ ರಾಹುಲ್ ಗಾಂಧಿ ಅವರನ್ನು ಒತ್ತಾಯಿಸಿದೆ.