ಮೋದಿ ಪ್ರಧಾನಿಯಾದ ನಂತರ ಪ್ರಶಸ್ತಿಗಳ ಮೌಲ್ಯ ಹೆಚ್ಚಳ


ಸಂಜೆವಾಣಿ ವಾರ್ತೆ
ಹರಪನಹಳ್ಳಿ, ಮಾ.15: ನರೇಂದ್ರ ಮೋದಿ ಪ್ರಧಾನಿಯಾದ ಆನಂತರ ದೇಶದಲ್ಲಿನ ಪ್ರಶಸ್ತಿಗಳ ಮೌಲ್ಯ ಹೆಚ್ಚಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.
ಅವರು ಪಟ್ಟಣದ ಡಾ. ಬಾಬುಜಗಜೀವನ ರಾಂ ಸಮುದಾಯ ಭವನದಲ್ಲಿ ಎ. ನಾರಾಯಣಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ, ಜನಪದ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ನಾಡೋಜ ಮುನಿವೆಂಕಟಪ್ಪ ಅವರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮೋದಿ ಅವರು ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶೋಷಿತ ವರ್ಗದವರು ಹಾಗೂ ಇತರ ಜನಸಾಮಾನ್ಯರನ್ನು ಗುರುತಿಸಿ ಆಯ್ಕೆ ಮಾಡುತ್ತಿದ್ದಾರೆ.
ಸಮಾಜದ ಮುನಿವೆಂಕಟಪ್ಪ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ರಾಜ್ಯ ಸರ್ಕಾರದ ಹೃದಯ ಗೆದ್ದಿದ್ದಾರೆ ಎಂದರು.ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನಕೊಟ್ಟ ನಂತರದ ದಿನಗಳಲ್ಲಿ 22 ಶಾಸಕರಿದ್ದ ಮಾದಿಗ ಸಮುದಾಯದವರು ಇಂದು 5 ಜನಕ್ಕೆ ಸೀಮಿತರಾಗಿದ್ದಾರೆ. ಶೋಷಿತ ವರ್ಗದವರು ಮತ ಮಾರಿಕೊಂಡಿದ್ದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.
ದಲಿತರ ವೋಟು ಮಾರುಕಟ್ಟೆಯಲ್ಲಿಲ್ಲ. ಎಂದು ಹೇಳಿದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ಬರುತ್ತದೆ ಎಂದ ಅವರು, ನಿಮ್ಮ ಬದುಕನ್ನು ನೀವೇ ರೂಪಿಸಿಕೊಳ್ಳಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ಸಂಸ್ಕಾರ ಕೊಡಬೇಕು ಎಂದು ತಿಳಿಸಿದರು.
ದೇವದಾಸಿ ಪದ್ಧತಿ ನಿರ್ಮೂಲನೆ ಯಾಗಬೇಕು. ಅಂತಹ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೌಲಭ್ಯ ಒದಗಿಸುತ್ತವೆ ಎಂದು ಹೇಳಿದರು.
ಸಹಕಾರ ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ಜಿ. ನಂಜನಗೌಡ ಮಾತನಾಡಿ, ಜಾತಿ ವ್ಯವಸ್ಥೆ ನಿರ್ಮೂಲನೆ ಯಾಗಬೇಕು, ಸಮ ಸಮಾಜ ನಿರ್ಮಾಣವಾಗ ಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೆಲಸ ಮಾಡುತ್ತಿವೆ ಎಂದರು.
ಜಿಪಂ ಮಾಜಿ ಸದಸ್ಯೆ ಸುವರ್ಣ ನಾಗರಾಜ ಮಾತನಾಡಿ, ತಮ್ಮಲ್ಲಿ ಒಗಟು ಮೂಡಿಸಿಕೊಂಡು ಮುಂದಿನ ದಿನಗಳಲ್ಲಿ ಮಾದಿಗ ಸಮಾಜದಲ್ಲಿ ಹೆಚ್ಚಿನ ಶಾಸಕರು ಗೆಲ್ಲುವಂತಾಗಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ವಿಜಯನಗರ ಜಿಲ್ಯಾ ಅಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಮಾತನಾಡಿ, ಕೆಳ ಸಮುದಾಯದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಕೊಡುವ ಕೆಲಸವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಿಂಡಿಪಾಪನಹಳ್ಳಿ, ನಾಡೋಜ ಮುನಿವೆಂಕಟಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ದಲಿತ ಮುಖಂಡ ತೆಲಿಗಿ ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು.ಪಿ.ಮಹಾಬಲೇಶ್ವರಗೌಡ ಮಾತನಾಡಿದರು. ಬಿಜೆಪಿ ಮುಖಂಡ ಕಣವಿಹಳ್ಳಿ ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಆರುಂಡಿ ನಾಗರಾಜ, ಎ.ಪಿ.ನಾಯ್ಕ್,ಮಂಡಲ ಅಧ್ಯಕ್ಷ ಸತ್ತೂರು ಹಾಲೇಶ್, ಪುರಸಭಾ ಅಧ್ಯಕ್ಷ ಎಚ್.ಎ. ಅಶೋಕ್, ವಕೀಲರಾದ ಲಿಂಗಾನಂದ, ಅಂಬೇಡ್ಕರ್ ಸಂಘದ ಆಜೀವ ಅಧ್ಯಕ್ಷ ನಿಚ್ಚವನಹಳ್ಳಿ ಭೀಮಪ್ಪ, ಹಗರಿಬೊಮ್ಮನಹಳ್ಳಿ ರಾಮಣ್ಣ, ಆಲೂರು ಲಿಂಗರಾಜ, ಕೆಂಚಪ್ಪ ಕಂಚಿಕೇರಿ, ಇಂದ್ರಪ್ಪ ಹಲುವಾಗಲು, ಹೊಸಪೇಟೆಯ ಯಲ್ಲಪ್ಪ ಬಂಡಾರದರ ಇತರರು ಇದ್ದರು.
ಮೋದಿ ಅವರು ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶೋಷಿತ ವರ್ಗದವರು ಹಾಗೂ ಇತರ ಜನಸಾಮಾನ್ಯರನ್ನು ಗುರುತಿಸಿ ಆಯ್ಕೆ ಮಾಡುತ್ತಿದ್ದಾರೆ. ಸಮಾಜದ ಬಂಧು ಮುನಿವೆಂಕಟಪ್ಪ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ರಾಜ್ಯ ಸರ್ಕಾರದ ಹೃದಯ ಗೆದ್ದಿದ್ದಾರೆ.
ಎ.ನಾರಾಯಣಸ್ವಾಮಿ ಸಚಿವ