ಮೋದಿ ಪ್ರಮಾಣವಚನಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ

ನವದೆಹಲಿ,ಜೂ.೬:ಜೂ. ೮ ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹಲವು ರಾಷ್ಟ್ರಗಳ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ.
ಬಾಂಗ್ಲಾ ದೇಶ ಮತ್ತು ಶ್ರೀಲಂಕಾ ಪ್ರಧಾನಿ ಸೇರಿದಂತೆ ಭೂತಾನ್, ಮಾರಿಷಿಯಸ್, ನೇಪಾಳದ ನಾಯಕರು ಪ್ರಧಾನಿ ಮೋದಿ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷದ ನೇತೃತ್ವದ ಎನ್‌ಡಿಎ ಮಿತ್ರಕೂಟ ೨೯೦ ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ೩ನೇ ಅವಧಿಗೆ ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಉಳಿದಂತೆ ಬಾಂಗ್ಲಾದೇಶ ಮತ್ತು ಶ್ರೀಲಂಕಾ, ಭೂ
ತಾನ್, ನೇಪಾಳ ಮಾರಿಷಿಯಸ್‌ನ ಉನ್ನತ ನಾಯಕರು ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲ್ಪಟ್ಟಿರುವ ವಿದೇಶಿ ನಾಯಕರ ಪಟ್ಟಿಯಲ್ಲಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ರಣಿಲ್‌ವಿಕ್ರಮಸಿಂಘೆ ಅವರನ್ನು ಕಚೇರಿ ಮಾಧ್ಯಮ ವಿಭಾಗ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಇದಕ್ಕೂ ಮೊದಲು ವಿಕ್ರಮಸಿಂಘೆ ಎನ್‌ಡಿಎ ಮಿತ್ರಕೂಟ ವಿಜೇತರಾದ ಹಿನ್ನೆಲೆ ಮೋದಿ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದ್ದರು.
ಮೋದಿ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್‌ಹಸೀನಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಹಸೀನಾ ಅವರನ್ನು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದ್ದರೆಂದು ಉನ್ನತ ಮೂಲಗಳು ತಿಳಿಸಿವೆ.
ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನೇಪಾಳದ ಪ್ರಧಾನಿ ಪುಷ್ಪಕಮಲ್‌ದಹಲ್ ಪ್ರಚಂಡ, ಭೂತಾನ್ ಪ್ರಧಾಣಿ ತೆರಿಂಗ್‌ತೋಗ್ಗೆ ಮತ್ತು ಮಾರಿಷಿಯಸ್ ಪ್ರಧಾನಿ ಪ್ರವಿಂದ್‌ಜುಗ್ನಾತ್ ಅವರನ್ನೂ ಸಹ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಔಪಚಾರಿಕ ಆಹ್ವಾನ ಇಂದು ಈ ಎಲ್ಲ ಗಣ್ಯರಿಗೆ ತಲುಪಲಿದೆ.
ಮೋದಿ ಅವರ ಮೊದಲ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಾದೇಶಿಕ ಗುಂಪುಗಳಾದ ಸಾರ್ಕ್ ನಾಯಕರು ಭಾಗವಹಿಸಿದ್ದರು. ೨ನೇ ಅವಧಿಗೆ ಮೋದಿ ಪ್ರಮಾಣವಚನ ಸ್ವೀಕರಿಸಿದ ವೇಳೆ ಬಿಮ್‌ಸ್ಟೆಕ್ ದೇಶದ ನಾಯಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.