ಮೋದಿ ಭಾವಚಿತ್ರ ಬಳಕೆ ಕೋರಿ ಈಶ್ವರಪ್ಪ ಕೇವಿಯೆಟ್ ಸಲ್ಲಿಕೆ

ಶಿವಮೊಗ್ಗ,ಏ.೬- ಲೋಕ ಸಭೆ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗದೆ ಬಂಡಾಯ ಸಾರಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದು, ತಮ್ಮ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸಿಕೊಳ್ಳಲು ನ್ಯಾಯಾಲಯದಲ್ಲಿ ಕೇವಿಯೆಟ್ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾವಚಿತ್ರ ಬಳಸಿಕೊಳ್ಳಲು ಮುನ್ನೆಚ್ಚರಿಕಾ ಕ್ರಮವಾಗಿ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಕೇವಿಯಟ್ ಸಲ್ಲಿಸಿದ್ದು, ಭಾವಚಿತ್ರವನ್ನು ಬಳಸಿಕೊಳ್ಳುವುದನ್ನು ಕಾನೂನಾತ್ಮಕವಾಗಿ ತಡೆಯುವ ಯಾರಾದರೂ ಪ್ರಯತ್ನಿಸಿದರೆ ಅದಕ್ಕೆ ಹಿನ್ನಡೆಯಾಗಲಿದೆ ಎಂಬುದು ಅವರ ಲೆಕ್ಕಾಚಾರವಾಗಿದೆ.
ಈ ವಿಚಾರವಾಗಿ ಇತ್ತೀಚೆಗೆ ಅವರು ಪ್ರಧಾನಿ ನರೇಂದ್ರ, ಮೋದಿ ವಿಶ್ವ ನಾಯಕ, ಭಾರತದ ಪ್ರಧಾನಮಂತ್ರಿ ಅದಕ್ಕೆ ಫೋಟೋ ಬಳಸಿಕೊಳ್ಳುತ್ತೇನೆ ಎಂದಿದ್ದರು.
.ಭಾರತದ ಪ್ರಧಾನಿಯ ಭಾವಚಿತ್ರವನ್ನು ಉಪಯೋಗಿಸುತ್ತಿದ್ದು, ಸಂವಿಧಾನದಲ್ಲಿ ಎಲ್ಲಾ ಭಾರತೀಯರು ಪ್ರಧಾನಿಯ ಭಾವಚಿತ್ರವನ್ನು ಬಳಸಿಕೊಳ್ಳಲು ಅವಕಾಶವಿದೆ ಎನ್ನುವುದು ಅವರ ವಾದವಾಗಿದೆ.
ಈಶ್ವರಪ್ಪ ಅವರು, ಸಲ್ಲಿಸಿರುವ ಕೆವಿಯಟ್ ಅವಧಿ ಮೂರು ತಿಂಗಳಾಗಿರುತ್ತದೆ. ಅಷ್ಟರಲ್ಲಿ ಚುನಾವಣೆ ಮುಗಿದಿರುತ್ತದೆ. ಯಾರು ಕೂಡ ಇದರ ವಿರುದ್ಧ ತಡೆ ತರಲು ಬರುವುದಿಲ್ಲ ಎನ್ನುವುದು ಅವರ ಯೋಚನೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸಿಕೊಳ್ಳಲು ಈಶ್ವರಪ್ಪನವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ.