ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹೋಮ!

 ಸಂಜೆವಾಣಿ ವಾರ್ತೆ

ಶಿವಮೊಗ್ಗ, ಮಾ. ೬: ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಮಂತ್ರಿಯಾಗಬೇಕು ಹಾಗೂ ಲೋಕಕಲ್ಯಾಣಾರ್ಥವಾಗಿ ಅತೀರುದ್ರ ಯಾಗವನ್ನು ಇಂದು ಶಿವಮೊಗ್ಗದ ವಿನೋಬನಗರ ಬಡಾವಣೆಯಲ್ಲಿರುವ ಶಿವಾಲಯ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.ವೀರಶೈವ ಪುರೋಹಿತ – ಅರ್ಚಕರ ಕ್ಷೇಮಾಭಿವೃದ್ದಿ ಸಂಘದ ಆಶ್ರಯದಲ್ಲಿ ಎರಡು ದಿನಗಳ ಕಾಲ ಯಾಗ ಹಮ್ಮಿಕೊಳ್ಳಲಾಗಿದೆ.ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರುದ್ರೇಗೌಡ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.