ಮೋದಿ @73, ಗಣ್ಯರಿಂದ ಶುಭಾಶಯ

ನವದೆಹಲಿ,ಸೆ.೧೭- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ೭೩ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಕೇಂದ್ರದ ಅನೇಕ ಸಚಿವರು ಮತ್ತು ನಾಯಕರು ಹುಟ್ಟುಹಬ್ಬದ ಶುಭಾಷಯ ಕೋರಿದ್ದಾರೆ.
ಪ್ರಧಾನಿ ಅವರ ಹುಟ್ಟುಹಬ್ಬವನ್ನು ಸೇವಾ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿವಿಧ ಸಾಧನೆಗಳೊಂದಿಗೆ ಜನರಿಗೆ ತಲುಪಿಸಲು ಅಕ್ಟೋಬರ್ ೨ರ ತನಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಇದೇ ವೇಳೆ ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನಗಳು ಮತ್ತು ಆರೋಗ್ಯ ಶಿಬಿರಗಳಂತಹ ಕಲ್ಯಾಣ ಚಟುವಟಿಕೆಗಳನ್ನು ಒಳಗೊಂಡಂತೆ ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಜನ್ಮದಿನದಂದು ಹಮ್ಮಿಕೊಂಡಿರುವ ಹಲವಾರು ಅಭಿವೃದ್ಧಿ ಉಪಕ್ರಮಗಳ ಪ್ರಾರಂಭದ ಭಾಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ದಿನವನ್ನು ‘ವಿಶ್ವಕರ್ಮ ಜಯಂತಿ’ ಯೂ ಆಗಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ “ಪಿಎಂ ವಿಶ್ವಕರ್ಮ” ಗೆ ಚಾಲನೆ ನೀಡಿದ್ದಾರೆ.
ಈ ಯೋಜನೆ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳು ಮತ್ತು ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಕೌಶಲ್ಯಗಳಲ್ಲಿ ತೊಡಗಿರುವ ಇತರರಿಗೆ ಸಹಾಯ ಮಾಡುವ ಗುರಿ ಹೊಂದಿದೆ. ಈ ಸಾಂಪ್ರದಾಯಿಕ ಉದ್ಯೋಗಗಳನ್ನು ತೊಡಗಿಸಿಕೊಂಡ ಮಂದಿಗೆ ಮತ್ತಷ್ಟು ತಮ್ಮ ಕೆಲಸದಲ್ಲಿ ಕೌಶಲ್ಯ ಹೊಂದಲು ನೆರವಾಗಲಿದೆ.

ಜೋಷಿ ಅಭಿನಂಧನೆ:

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅವರು ಪ್ರಧಾನಿ ಮೋದಿಯವರಿಗೆ ಅವರ ಜನ್ಮದಿನದಂದು ನನ್ನ ಶುಭಾಶಯಗ ಕೋರಿದ್ದು ದೀರ್ಘಾಯುಷ್ಯ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಖರ್ಗೆ ಶುಭಾಷಯ

ಪ್ರಧಾನಿ ನರೇಂದ್ರ ಮೋದಿ ಅವರು ೭೩ನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಭ ಕೋರಿದ್ದಾರೆ

“ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಶುಭಾಶಯಗಳು, ಅ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.