ಮೋಹನ್ ಶಾಂತನಗೌಡರ್ ನಿಧನಕ್ಕೆ ಎಸ್.ಎಸ್- ಎಸ್ಸೆಸ್ಸೆಂ ಸಂತಾಪ

ದಾವಣಗೆರೆ.ಏ.೨೫; ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಅವರ ನಿಧನಕ್ಕೆ ಮಾಜಿ ಸಚಿವರೂ, ಹಾಲಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮೋಹನ್ ಶಾಂತನಗೌಡರ್ ಅವರು ಈಗಿನ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕೆರೂರು ಎಂಬ ಗ್ರಾಮದಲ್ಲಿ ಹುಟ್ಟಿ ವಕೀಲರಾಗಿ ಉತ್ತಮ ಸೇವೆ ಸಲ್ಲಿಸಿ ಹೈಕೋರ್ಟ್ ವಕೀಲರಾಗಿ, ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿರುವುದನ್ನು ತಮ್ಮ ಸಂತಾಪ ಸೂಚಕದಲ್ಲಿ ಸ್ಮರಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗಕ್ಕೆ ಮತ್ತವರ ಬಂಧು-ಬಳಗಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಆ ಭಗವಂತನಲ್ಲಿ ಮಾಜಿ ಸಚಿವರೂ, ಹಾಲಿ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಪ್ರಾರ್ಥಿಸಿದ್ದಾರೆ.