ಮೌಢ್ಯತೆ ಅಂಧಕಾರ ತ್ಯಜಿಸಿ


ಸಂಜೆವಾಣಿ ವಾರ್ತೆ
ಹಿರಿಯೂರು. : ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ ಮತ್ತು ಅಂಧಕಾರವನ್ನು ಹೋಗಲಾಡಿಸಿ ಸಮಾಜಕ್ಕೆ ಪೂರಕವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಪ್ರಾಂಶುಪಾಲ ಸಿ. ಸಂದೀಪ್ ಯಾದವ್ ತಿಳಿಸಿದರು.ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ರಸ್ತೆಯಲ್ಲಿರುವ ಶ್ರೀ ಬಸವರಾಜ್ ಪ್ಯಾರಾಮೆಡಿಕಲ್ ಮತ್ತು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮನುಷ್ಯ ಹುಟ್ಟಿದಾಗಿನಿಂದ ಸಾಯುವವರೆಗೂ ದಿನನಿತ್ಯ ಜೀವನದಲ್ಲಿ ವಿಜ್ಞಾನ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದರು. ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ದಿನವನ್ನಾಗಿ ಆಚರಿಸಲಾಗುತ್ತಿದೆ. ಸರ್. ಸಿ.ವಿ. ರಾಮನ್ ಅವರು ಬೆಳಕಿನ ಚದುರುವಿಕೆಯು ಪ್ರಯೋಗದ ಮೂಲಕ ತಿಳಿಸಿ ವಿದ್ಯಾರ್ಥಿಗಳಿಗೆ ಅಮೂಲ್ಯವಾದಂತ ಕೊಡುಗೆಯನ್ನು ನೀಡಿದ್ದಾರೆ. ಈ ಬೆಳಕಿನ ಚದುರುವಿಕೆಯನ್ನು ರಾಮನ್ ಎಫೆಕ್ಟ್ ಎಂದು ಕರೆಯುತ್ತಾರೆ. ಈ ಸಾಧನೆಗೆ ಅವರಿಗೆ ಸಂದ ಪ್ರಶಸ್ತಿ ನೋಬಲ್ ಪ್ರಶಸ್ತಿ ನೀಡಲಾಯಿತು ಎಂದು ಹೇಳಿದರು.ಈ ಸಂದರ್ಭದಲ್ಲಿ ಉಪನ್ಯಾಸಕಿಯರಾದ ಲಾವಣ್ಯ, ಹರ್ಷಿತಾ, ಕೀರ್ತನಾ, ಯು. ಅಮಿತಾ, ಲಿಖಿತ, ಮೀನಾ ಭಾಗವಹಿಸಿದ್ದರು