ಮೌಲಾನಾ ವಕ್ಫ್ ಮಂಡಳಿ ಅಧ್ಯಕ್ಷ

ಬೆಂಗಳೂರು, ನ.೧೭- ಹಿರಿಯ ವಿದ್ವಾಂಸ, ಮೌಲಾನಾ ಶಾಫಿ ಸಅದಿ ನೂತನ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದ ಡಾ.ಮುಹಮ್ಮದ್ ಯೂಸುಫ್ ರವರ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಬೆಂಗಳೂರು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಸ್ ಬೋರ್ಡ್ ಕಚೇರಿಯಲ್ಲಿ ಚುನಾವಣೆ ನಡೆದಿತ್ತು.
ಬೆಳಿಗ್ಗೆ ೧೦:೩೦ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಒಟ್ಟು ಇಬ್ಬರು ನಾಮಪತ್ರ ಸಲ್ಲಿಸಿದ್ದರು, ಆದರೆ, ಅಂತಿಮವಾಗಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಶಾಫಿ ಸಅದಿ ನೂತನ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎರಡು ಬಾರಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಶಾಫಿ ಸಅದಿಯವರು ಕರ್ನಾಟಕ ರಾಜ್ಯ ಸರ್ಕಾರದಿಂದ ಕಳೆದ ಎರಡು ಅವಧಿಗೆ ರಾಜ್ಯ ವಕ್ಸ್ ಬೋರ್ಡ್ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದರು.
ಸದ್ಯ ಕರ್ನಾಟಕ ಮುಸ್ಲಿಮ್ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ವಕ್ಫ್ ಬೋರ್ಡ್ ಅಧ್ಯಕ್ಷರಾಗಿದ್ದ ಡಾ.ಮುಹಮ್ಮದ್ ಯೂಸುಫ್ ಕಳೆದ ಸಾಲಿನ ಮಾರ್ಚ್ ನಲ್ಲಿ ಕೋವಿಡ್ ನಿಂದ ನಿಧನರಾದ ನಂತರ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು.
ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ತಸ್ವೀರ್ ಸೇರ್, ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್, ಶಾಸಕಿ ಕನೀಝ್ ಫಾತಿಮಾ ಹಾಗೂ ಸದಸ್ಯರಾದ ಅಬ್ದುಲ್ ರಿಯಾಝ್ ಖಾನ್, ಯಾಕೂಬ್ ಇತರರಿದ್ದರು.