
ಬೀದರ್:ಮೇ.4: ಮೌಲಿಕ ಶಿಕ್ಷಣದಿಂದ ವಿದ್ಯಾರ್ಥಿಗಳು ತಮ್ಮ ನಿಜ ಜೀವನದಲ್ಲಿ ಸ್ಪರ್ಧತ್ಮಕ ಜಗತ್ತನ್ನು ಎದುರಿಸಬಹುದಾಗಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ.ಬಿ.ಎಸ್ ಬಿರಾದಾರ ತಿಳಿಸಿದರು.
ಇತ್ತಿಚೀಗೆ ನಗರದ ಕರ್ನಾಟಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಕಾಲೇಜಿನಲ್ಲಿ ಯಾವತ್ತು ಮೌಲ್ವಿಕ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಇಲ್ಲಿಯ ಪ್ರಾಧ್ಯಾಪಕರು ಅನುಭಾವಿಗಳು ಹಾಗೂ ನುರಿತ ಸಿಬ್ಬಂದಿಗಳಿಂದ ಕೂಡಿರುವ ಅತ್ಯಂತ ಹಳೆಯ ಕಾಲೇಜು ಇದಾಗಿದ್ದು, ಇಲ್ಲಿಯ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇಲ್ಲಿ ನಡೆಯುವ ಎಲ್ಲ ರೀತಿಯ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಕರ್ನಾಟಕ ರಾಷ್ಟೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಅನುಕುಲ ಮಾಡಿಕೊಡುತ್ತಿದ್ದೇವೆ. ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡುತ್ತಿರುವ ನಮ್ಮ ಕಾಲೇಜಿನ ಪೂರ್ವಜರು ಮೊದಲು ಕೇವಲ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಸಂಸ್ಥೆ ಹುಟ್ಟು ಹಾಕಿದ್ದರು. ಆದರೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಹಾಗೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿದ್ದೇವೆ. ಇಂದು ಎಲ್.ಕೆ.ಜಿಯಿಂದ ಹಿಡಿದು ಪಿ.ಹೆಚ್.ಡಿ ವರೆಗೆ ಶಿಕ್ಷಣ ನೀಡಲಾಗುತ್ತಿದೆ. ಒಂದು ವಿಶ್ವವಿದ್ಯಾಲಯ ಮಾಡುವ ಕಾರ್ಯ ನಮ್ಮ ಕರ್ನಾಟಕ ಕಾಲೇಜು ಮಾಡುತ್ತಿರುವುದು ನಮಗೆ ಹೆಮ್ಮೆ ಇದೆ ಎಂದರು.
ಬೀದರ್ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪೆÇ್ರ.ಪರಮೇಶ್ವರ ನಾಯಕ್, ವಿಶ್ರಾಂತ ಕುಲಪತಿ ಪೆÇ್ರ.ಬಿ.ಜಿ ಮೂಲಿಮನಿ, ಕರ್ನಾಟಕ ರಾಷ್ಟೀಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ ಶಟಕಾರ, ಕಾರ್ಯದರ್ಶಿ ಸಿದ್ರಾಮ ಪಾರಾ, ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ಅಡಳಿತ ಮಂಡಳಿ ಸದಸ್ಯರಾದ ರವಿ ಹಾಲಳ್ಳಿ, ಸಿದ್ಧರಾಜ ಪಾಟೀಲ, ಮಹೇಶಕುಮಾರ ಭದಬದೆ, ಚಂದ್ರಕಾಂತ ಶಟಕಾರ, ವೀರಭದ್ರಪ್ಪ ಭುಯ್ಯಾ ಹಾಗೂ ಇತರರು ವೇದಿಕೆಯಲ್ಲಿದ್ದರು.
ಇದೇ ವೇಳೆ ನೂತನ ಸ್ನಾತಕೋತ್ತರ ಕಲೆ ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜರುಗಿತು.
ಕಾಲೇಜಿನ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ್ ಹಂಗರಗೆ ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಗನ್ನಾಥ ಹೆಬ್ಬಾಳೆ ಪಿ.ಜಿ ಕೋರ್ಸ್ ಗಳ ಪರಿಚಯ ಮಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಪಾಟೀಲ ಸ್ವಾಗತಿಸಿದರು. ಉಪ ಪ್ರಾಚಾರ್ಯ ಪೆÇ್ರ.ಅನಿಲ ಚಿಕಮಣೂರ್ ವಂದಿಸಿದರು. ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕ ರೋನಾಲ್ಡ್ ಸಂಪತಕುಮಾರ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.