ಮ್ಯಾನುವೆಲ್ ಸ್ಕ್ಯಾವೆಂಜರ್ ಗಳಿಗೆ ಮೂಲಭೂತ ಸೌಕರ್ಯಕ್ಕೆ ಒತ್ತಾಯ

ರಾಯಚೂರು.ಸೆ.೦೯-ಜಿಲ್ಲೆಯಲ್ಲಿ ಮ್ಯಾನುವೆಲ್ ಸ್ಕ್ಯಾವೆಂಜರ್ ಹಾಗೂ ಅವರ ಅವಲಂಬಿತರಿಗೆ ಆಗುತ್ತಿರುವ ಅನ್ಯಾಯಗಳನ್ನು ಸರಿ ಪಡಿಸಿ ನ್ಯಾಯ ಒದಗಿಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಪೌರಕರ್ಮಿಕರ ಮಹಾಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಸ್ಥಾನಿಕ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಮ್ಯಾನುವೆಲ್ ಸ್ಕ್ಯಾವೆಂಜರ್ ಹಾಗೂ ಅವರ ಅವಲಂಬಿತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಜನಾಂಗದವರ ಬದುಕಿನ ಚಿತ್ರಣವನ್ನು ಬದಲಾಯಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬೆಳೆಯಲು ಅನುಕೂಲ ಮಾಡಿ ಅನೇಕ ಯೋಜನೆಗಳನ್ನು ರೂಪಿಸಿದೆ ಆದರೆ ಇಲಾಖೆಯ ಅಧಿಕಾರಿಗಳ ಕಾರ್ಯ ವೈಫಲ್ಯ ಮತ್ತು ಮಧ್ಯವರ್ತಿಗಳ ಹಾವಳಿಯಿಂದ ಯಾವುದೇ ಯೋಜನೆ ತಲುಪುತ್ತಿಲ್ಲ ಅದರಿಂದ ಎಲ್ಲ ಭಂಗಿ ಕುಟುಂಬಗಳಿಗೆ ಕಡ್ಡಾಯವಾಗಿ ಗುರಿತಿನ ಚೀಟಿ ನೀಡಿ, ಸಫಾಯಿ ಕರ್ಮಚಾರಿಗಳ ರುದ್ರಭೂಮಿಯನ್ನು ಅತಿಕ್ರಮಿಸಿದವರಿಂದ ಬಿಡಿಸಬೇಕು,ಅಭಿವೃದ್ಧಿ ನಿಗಮಗಳಲ್ಲಿ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.