ಮ್ಯಾಸಬೇಡರಿಗೆ ಪ್ರತ್ಯೇಕ ನಿಗಮಕ್ಕೆ ಆಗ್ರಹ

ಸಂಡೂರು:ಜ:12:ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವಂತಹ ಮ್ಯಾಸ ಬ್ಯಾಡ ಬುಡಕಟ್ಟು ಜನರ ಅಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಮ್ಯಾಸಬೇಡರ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಬೇಕು ಎಂದು ಇಲ್ಲವಾದಲ್ಲಿ ಉಗ್ರವಾದ ಪ್ರತಿಭಟನೆ ಮಾಡುವುದಾಗಿ ತಾಲೂಕು ಮ್ಯಾಸ ಬೇಡರ ಮುಖಂಡ ಲಿಂಗರಾಜ್ ಒತ್ತಾಯಿಸಿದರು.
ಅವರು ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಉಪತಹಶೀಲ್ದಾರ್ ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ ಮ್ಯಾಸ ಬೇಡಬುಡಕಟ್ಟು ಸಂಸ್ಕøತಿ ಸಂರಕ್ಷಣಾ ಸಮಿತಿಯ ಮೂಲಕ ಗಡಿ ಜಿಲ್ಲೆಗಳಾದ ಬಳ್ಳಾರಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿ ನಾಯಕ ಪಂಗಡದವರಾದ ಮ್ಯಾಸನಾಯಕರು ನೆಲೆಸಿದ್ದು ಮ್ಯಾಸ ಬೇಡ ಸಮುದಾಯವು ನೆಲೆಸಿರುವ ಹಟ್ಟಿಗಳು ಇದುವರೆಗೂ ಕಂದಾಯ ಗ್ರಾಮಗಳಾಗಿಲ್ಲ, ಈಗಾಗಲೇ ನಾಯಕ ವಾಲ್ಮೀಕಿ ಎಂಬ ಹೆಸರಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿಯನ್ನು ನೀಡಿ 45 ವರ್ಷಗಳೇ ಗತಿಸಿದರೂ ಸಹ ಈ ಬುಡಕಟ್ಟು ಜನರು ಮುಖ್ಯವಾಹಿನಿಗೆ ಬರಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಈಗಾಗಲೇ ಇರುವ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ನಮಗೆ ಯಾವುದೇ ರೀತಿಯ ಅನುಕೂಲವಿಲ್ಲದಂತಾಗಿದೆ, ಕರ್ನಾಟಕ –ಅಚಿಧ್ರಪ್ರದೇಶದ ಗಡಿ ಭಾಗದಲ್ಲಿ ನೆಲೆಸಿರುವ ನಾಯಕ ಪಂಗಡದ ಮ್ಯಾಸಬೇಡ ಬುಡಕಟ್ಟು ಜನಾಂಗ ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವರ ಉಳಿವಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವ ಮೂಲಕ ವಿಶೇಷ ಅನುದಾನವನು ಬಿಡಗಡೆ ಮಾಡಬೇಕು, ನಮ್ಮ ಸಂವಿಧಾನದ ಹಕ್ಕುಗಳು ಮತ್ತು ಸೌಲಭ್ಯಗಳು ನಮಗೆ ಸಿಗುವಂತೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಶಿವಕುಮಾರ್, ಲಿಂಗರಾಜ, ನಟರಾಜ, ಇತರ ಅನೇಕ ಮುಖಂಡರು ಮನವಿ ಪತ್ರ ಸಲ್ಲಿಸಿದರು.