ಮ.ಬೆಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ

ಹನೂರು ಮಾ.2:- ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಗೆ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಚಾಲನೆ ನೀಡಿದರು.
ಹೆಲಿಕ್ಯಾಪ್ಟರ್ ಮೂಲಕ ಮಹದೇಶ್ವರ ಬೆಟ್ಟಕ್ಕೆ ಬಂದಿಳಿದ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆಪಿ ನಡ್ದಾ ಹಾಗೂ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಶೋಭಾ ಕರಂದ್ಲಾಂಗ್ಲೆ ಸೇರುವಂತೆ ಇನ್ನಿತರ ಗಣ್ಯರು ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಜೆಪಿ ನಡ್ಡಾ ಅವರು ಮಾದಪ್ಪನ ಸನ್ನಿಧಿಯ ಮುಂಭಾಗ ನಗಾರಿ ಬಾರಿಸಿ ಪಕ್ಷದ ಬಾವುಟ ಹಾರಿಸುವ ಮೂಲಕ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಗೆ ಪೂಜೆ ಸಲ್ಲಿಸಿ ಚಾಲನೆ ನೀಡಿ. ಶ್ರೀ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಚುನಾವಣಾ ರಣಕಹಳೆಯನ್ನು ಮೊಳಗಿಸಿದರು.
ನಂತರ ಬೇಡಗಂಪಣ ಸಮುದಾಯ ಹಾಗೂ ಸೋಲಿಗರೊಂದಿಗೆ ಸಂವಾದ ನಡೆಸಿದರು. ನಂತರ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ದೇವರ ಆಶೀರ್ವಾದದ ಮೂಲಕ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಾಗಿದೆ.
ಇಂದು ಮಹದೇಶ್ವರ ಬೆಟ್ಟದ ಸೇರಿದಂತೆ ನಾಲ್ಕು ಕಡೆಗಳಿಂದ ಆರಂಭವಾಗುವ ವಿಜಯ ಸಂಕಲ್ಪ ರಥಯಾತ್ರೆ ರಾಜ್ಯದ 224 ಕ್ಷೇತ್ರಗಳಲ್ಲೂ ನಡೆಯಲಿದೆ. 150ಕ್ಕೂ ಹೆಚ್ಚು ರೋಡ್ ಶೋ, ಸಾರ್ವಜನಿಕ ಸಭೆಗಳನ್ನು ನಡೆಸಿ ನರೇಂದ್ರ ಮೋದಿ ಅವರ ಜನಪರ ಆಡಳಿತದ ಬಗ್ಗೆ ತಿಳಿಸುವುದು.
ಸನ್ಮಾನ್ಯ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಶೋಭಾ ಕರಂದ್ಲಾಂಗ್ಲೆ, ಈಶ್ವರಪ್ಪ, ಅರಗ ಜ್ಞಾನೇಂದ್ರ, ಶಾಸಕ ನಿರಂಜನ್ ಕುಮಾರ್, ಹನೂರು ಬಿಜೆಪಿ ಯುವ ನಾಯಕರಾದ ಡಾಕ್ಟರ್ ಪ್ರೀತನ್ ನಾಗಪ್ಪ ಸೇರಿದಂತೆ ಇನ್ನಿತರ ಗಣ್ಯರು ಹಾಜರಿದ್ದರು.