ಮ.ಮ ಬೆಟ್ಟದಲ್ಲಿ ಕೊರೊನಾ ಟಾಸ್ಕ್ ಪೋರ್ಸ್ ಕಮಿಟಿ ರಚನೆ

ಹನೂರು: ಮೇ.26: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಕೊರೊನಾ ಸೋಂಕು ತಡೆಗಟ್ಟುವ ದಿಸೆಯಲ್ಲಿ ಗ್ರಾ.ಪಂ.ವತಿಯಿಂದ ಸ್ಥಳಿಯ ಟಾಸ್ಕ್ ಪೋರ್ಸ್ ಕಮಿಟಿಯನ್ನು ರಚಿಸಲಾಯಿತು.
ಈ ಕಮಿಟಿಯಲ್ಲಿ ಸ್ಥಳಿಯ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾ.ಪಂ.ಅಧಿಕಾರಿಗಳು, ಸಿಬ್ಬಂದಿಗಳು, ಸದಸ್ಯರುಗಳನ್ನು ಒಳಗೊಂಡಿದೆ.
ಈ ಕಾರ್ಯಕ್ರಮದಲ್ಲಿ ಪಿಡಿಒ ರಾಜ್‍ಕುಮಾರ್ ಮಾತನಾಡಿ, ಕೊರೊನಾ ಸೋಂಕು ತಡೆಗಟ್ಟುವ ದಿಸೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸೇವೆ ಅನನ್ಯವಾದದ್ದು, ಮುಂಜೋಣಿ ಕೊರೊನಾ ವಾರಿಯರ್ಸ್‍ಗಳಾದ ನಿಮಗೆ ಗ್ರಾ.ಪಂ.ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಗ್ರಾ.ಪಂ.ಸದಸ್ಯ ನಾಗೇಂದ್ರ ಮಾತನಾಡಿ, ಕೊರೊನಾ ಸೋಂಕು ಧೃಢಪಟ್ಟರೆ ಹೋಂ ಐಸೋಲೇಷನ್ ಬದಲು ಕೋವಿಡ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯಬೇಕು. ಇದರಿಂದ ಗ್ರಾಮದಲ್ಲಿ ಸೋಂಕು ಇತರರಿಗೆ ಹರಡುವುದು ತಪ್ಪುತ್ತದೆ ಎಂದ ಅವರು ಸೋಂಕು ತಡೆಗಟ್ಟುವ ದಿಸೆಯಲ್ಲಿ ಮುಂಜಾಗ್ರಕ್ರಮವಾಗಿ ಕೋವಿಡ್ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೇ ಪಾಲಿಸಬೇಕೆಂದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಕುಮಾರ್, ಸದಸ್ಯರಾದ ಶರವಣ, ಗೋವಿಂದ, ಚಂದ್ರಶೇಖರ್, ಮಹೇಶ್, ಸಿಬ್ಬಂದಿಗಳಾದ ಶಿವಮ್ಮ, ಮಾಲ, ಗೋಪಿ, ಮಹೇಶ್ ಇದ್ದರು.