ಮ.ಮ ಬೆಟ್ಟ: ಹುಂಡಿ ಏಣಿಕೆ 1.82 ಕೋಟಿ ರೂ. ಸಂಗ್ರಹ

ಸಂಜೆವಾಣಿ ವಾರ್ತೆ
ಹನೂರು.ಮಾ.2:- ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು ಸುಮಾರು 1.ಕೋಟಿ 82 ಲಕ್ಷ 33 ಸಾವಿರ ರೂ. ಸಂಗ್ರಹವಾಗಿದೆ.
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಸಾಲೂರು ಬ್ರಾಹ್ಮಠಾಧ್ಯಕ್ಷರು ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳವರ ಉಪ ಸ್ಥಿತಿಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಮಲೆ ಮಾದಪ್ಪನ ಸನ್ನಿಧಿಯಲ್ಲಿ ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ ಹುಂಡಿ ಹಣವನ್ನು ಬೆಟ್ಟದ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ಬೆಳಗ್ಗೆಯಿಂದಲೂ ನಡೆದಿದ್ದು ಸಂಜೆಯವರೆಗೂ ಮುಗಿಯಿತು.
ದಿನಾಂಕ 02/02/2024 ರಿಂದ 29/02/2024 ವರೆಗಿನ 28 ದಿನಗಳಲ್ಲಿ ಮಹದೇಶ್ವರ ಸ್ವಾಮಿ ಭಕ್ತರು ಕಾಣಿಕೆ ರೂಪದಲ್ಲಿ ಹಾಕಿದ್ದ ಹುಂಡಿಯಲ್ಲಿ ಸುಮಾರು 1.ಕೋಟಿ 82.ಲಕ್ಷ 33.ಸಾವಿರ ರೂಗಳು ಹಾಗೂ ಚಿನ್ನ 41 ಗ್ರಾಂ, ಬೆಳ್ಳಿ 1.ಕೆಜಿ 200 ಗ್ರಾಂ ಹುಂಡಿಯಲ್ಲಿ ದೊರೆತಿದೆ.
ಅಮಾವಾಸ್ಯೆ ಹುಣ್ಣಿಮೆ ಹಾಗೂ ರಜಾ ದಿನಗಳಲ್ಲಿ ಮಲೆ ಮಾಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನ ಆಗಮಿಸಿದ್ದು ಮಲೆ ಮಾದಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಹರಕೆ ಕಾಣಿಕೆಗಳನ್ನು ಸಲ್ಲಿಸಿರುತ್ತಾರೆ.
ಹುಂಡಿ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ನಾಗೇಶ್ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಬ್ಯಾಂಕ್ ಅಪ್ ಬರೋಡ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.