ಯಕ್ಷಗಾನ ವೇಷಭೂಷಣ ಉಚಿತ ಸ್ಪರ್ಧೆ;ಮಾನ್ಯಗೆ ಪ್ರಥಮ ಬಹುಮಾನ

ಸಂಜೆವಾಣಿ ವಾರ್ತೆ

ದಾವಣಗೆರೆ.ಜ.22: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ 34ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇತ್ತೀಚಿಗೆ ನಗರದ ದೃಶ್ಯಕಲಾ ಮಹಾವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಯಕ್ಷಗಾನ ವೇಷಭೂಷಣ ಉಚಿತ ಸ್ಪರ್ಧೆಯಲ್ಲಿ 5ನೇ ತರಗತಿಯ ಪ್ರತಿಭಾನ್ವಿತ ಕುಮಾರಿ ಮಾನ್ಯ ಸಂದೀಪ್ ಶೆಣೈ ಪ್ರಥಮ ಬಹುಮಾನ ಪಡೆದಿರುತ್ತಾಳೆ ಎಂದು ಯಕ್ಷರಂಗ ಯಕ್ಷಗಾನ ಸಂಸ್ಥೆಯ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ್ ಶೆಟ್ಟಿ, ತಿಳಿಸಿದ್ದಾರೆ.7ನೇ ತರಗತಿಯ ಕುಮಾರಿ ಕೆ.ಯು. ಅಪೇಕ್ಷ ಉಮೇಶ್ ದ್ವಿತೀಯ ಬಹುಮಾನ ಪಡೆದಿದ್ದು ನಗರದ ದೃಶ್ಯ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜೈರಾಜ್ ಚಿಕ್ಕಪಾಟೀಲರವರು ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಕಲಾಕುಂಚ ಯಕ್ಷರಂಗ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್, ಶಿಲ್ಪಚಿತ್ರಕಲಾವಿದರಾದ ಚಂದ್ರಶೇಖರ ಎಸ್.ಸಂಗಾ ಮುಂತಾದವರು ಉಪಸ್ಥಿತರಿದ್ದರು.