ಯಡ್ರಾಮಿಯಲ್ಲಿ ಜನಜಾಗೃತಿ ಜಾಥಾಕ್ಕೆ ಚಾಲನೆ

ಕಲಬುರಗಿ,ಆ.5:ತಾಲೂಕಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಸಂಸ್ಕಾರ ಪ್ರತಿಷ್ಠಾನ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಯಡ್ರಾಮಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಜಾಥಾಕ್ಕೆ ಯಡ್ರಾಮಿಯ ಗ್ರೇಡ-2 ತಹಶೀಲ್ದಾರರಾದ ಸತ್ಯಪ್ರಸಾದ ಅವರು ಗುರುವಾರ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಮಕ್ಕಳನ್ನು ಯಾವುದೇ ಕಾರಣಕ್ಕೂ ದುಡಿಸಿಕೊಳ್ಳಬಾರದು. ಮಕ್ಕಳ ಉಜ್ವಲ ಭವಿಷಕ್ಕಾಗಿ ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಉಪ ವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ್ ಮಾತನಾಡಿ, ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ಯಾವುದೇ ಮಗು ಶಿಕ್ಷಣದಿಂದ ವಂಚಿತ ವಾಗಬಾರದು. ಬಾಲಕಾರ್ಮಿಕ ಮಕ್ಕಳನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಯಡ್ರಾಮಿ ತಾಲೂಕಾವನ್ನು ಬಾಲಕಾರ್ಮಿಕ ಮುಕ್ತ ತಾಲೂಕಾವನ್ನಾಗಲು ಎಲ್ಲರೂ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ 3ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಕೆ.ಎಸ್. ಪ್ರಸನ್ನ ಮಾತನಾಡಿ, ಇಲಾಖೆಯು ಬಾಲಕಾರ್ಮಿಕತೆಯನ್ನು ತೊಡೆದು ಹಾಕಲು ಕ್ರಿಯಾ ಯೋಜನೆ ರೂಪಿಸಿ ಅದರಂತೆ ಕೆಲಸ ಮಾಡುತ್ತಿದೆ. ಅಸಂಘಟಿತ ಕಾರ್ಮಿಕÀರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಯಡ್ರಾಮಿ ಸರಕಾರಿ ಬಾಲಕರ ಪೌಢಶಾಲೆಯ ಮುಖ್ಯೋಪಾಧ್ಯಾಯರಾದ ಮಲಕಪ್ಪಾ ಭಜಂತ್ರಿ, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಡಿ.ಇ.ಓ. ಅನಂತ ಜೋಷಿ ಸೇರಿದಂತೆ ಡಾನಬಾಸ್ಕೋ ಚೈಲ್ಡ್ ಲೈನ್ ಸಿಬ್ಬಂದಿ, ಸರಕಾರಿ ಬಾಲಕರ ಫ್ರೌಢ ಶಾ¯ಯ ಶಿಕ್ಷಕರ ವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಜೋಷಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಅನಂತ ಜೋಷಿ ವಂದಿಸಿದರು.
ಯಡ್ರಾಮಿ ಸರ್ಕಾರಿ ಬಾಲಕರ ಫ್ರೌಢಶಾಲೆಯಿಂದ ಆರಂಭಗೊಂಡ ಜಾಥಾವು ಮುಖ್ಯ ರಸ್ತೆ ಮೂಲಕ ಯಡ್ರಾಮಿ ಬಸ್ ನಿಲ್ದಾಣಕ್ಕೆ ಆಗಮಿಸಿ ಕೊನೆಗೊಂಡಿತು. ಈ ಜಾಥಾದಲ್ಲಿ “ಬಾಲಕಾರ್ಮಿಕ ಮಕ್ಕಳನ್ನು ದುಡಿಮೆಯಿಂದ ಬಿಡಿಸಿ ಶಾಲೆಗೆ ಕಳುಹಿಸಿ” ಎಂಬ ಘೋಷಣೆ ಮೂಲಕ ಸಾರ್ವಜನಿಕರಿಗೆ, ಅಂಗಡಿ, ಹೋಟೆಲ್, ಗ್ಯಾರೇಜ್ ಮಾಲೀಕರಿಗೆ ಕರ ಪತ್ರಗಳ್ನು ನೀಡಿ ಅರಿವು ಮೂಡಿಸಿದರು.