ಯದುವೀರ್ ಒಡೆಯರ್ ಅವರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ

ಸಂಜೆವಾಣಿ ನ್ಯೂಸ್
ಮೈಸೂರು.ಜೂ.05:- ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಯಾದ ಮಹಾರಾಜ ಯದುವೀರ್ ಒಡೆಯರ್ ಅವರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶೀಲರಾಗಿರುವುದನ್ನು ಭಾರತೀಯ ಜನತಾ ಪಾರ್ಟಿಯ ಎಲ್ಲಾ ಕಾರ್ಯಕರ್ತ ಬಂಧುಗಳು ಪಕ್ಷದ ಕಚೇರಿಯ ಮುಂದೆ ಸಂಭ್ರಮಾಚರಣೆಯನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಭಾರತ ಮಾತಾ ಕಿ ಜೈ ಮೋದಿ ಅವರಿಗೆ ಜಯವಾಗಲಿ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಘೋಷಣೆಯನ್ನು ಕೂಗುವ ಮುಖಾಂತರ ಸಂಭ್ರಮಾಚರಣೆಯನ್ನು ಮಾಡಿದರು ಈ ಸಂದರ್ಭದಲ್ಲಿ ನಾಗೇಂದ್ರ ಅವರು ಮಾಜಿ ಸಿಂಡಿಕೇಟ್ ಸದಸ್ಯರಾದ ಡಾಕ್ಟರ್ ಕೆ ವಸಂತ್ ಕುಮಾರ್ ಅವರು ಪಕ್ಷದ ನಾಯಕರಾದ ಜಯಪ್ರಕಾಶ್ ರವರು ಮೈವಿ ರವಿಶಂಕರ್ ಅವರು ಹಲವಾರು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.