ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ವೆಚ್ಚ ವೀಕ್ಷಕರು ಭೇಟಿ


ಸಂಜೆವಾಣಿ ವಾರ್ತೆ
ಯಲಬುರ್ಗಾ, ಏ.20: 63 ಯಲಬುರ್ಗಾ ವಿಧಾನಸಭಾ ಕ್ಣೇತ್ರದ ಯಲಬುರ್ಗಾ ಪಟ್ಟಣದ ಚುನಾವಣಾಧಿಕಾರಿಗಳ ಕಚೇರಿಗೆ ಎರಡನೇ ಬಾರಿಗೆ ಚುನಾವಣಾ ವೆಚ್ಚ ವೀಕ್ಷಕರಾದ ತಮಿಳುನಾಡಿನ ಎಸ್.ಆರ್. ನೆದುಮಾರನ್ (IRS)ಅವರು ಗುರುವಾರ ಭೇಟಿ ನೀಡಿ ಚುನಾವಣೆಗೆ ಸಂಬಂಧಿಸಿದ ಕಡತಗಳ ಪರಿಶೀಲಿಸಿದರು.
ಈ ವೇಳೆ ಚುನಾವಣಾಧಿಕಾರಿಗಳಾದ ಕಾವ್ಯರಾಣಿ ಕೆ.ವಿ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ನಿಮಿತ್ತ ಕೈಗೊಂಡ ಚುನಾವಣಾ ಕೆಲಸಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ಚುನಾವಣೆಯ ಪೂರ್ವಸಿದ್ದತೆಗಳನ್ನು ಗಮನಿಸಿ ಚುನಾವಣಾ ವೆಚ್ಚ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ ಅಗತ್ಯ ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಗಳಾದ ವಿಠಲ್ ಚೌಗಲೆ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಪಾಟೀಲ್ ಬಿರಾದಾರ್, ಉಪತಹಶೀಲ್ದಾರ್ ರಾದ ವಿಜಯಕುಮಾರ ಗುಂಡೂರ, ಹಾಗೂ ಲೆಕ್ಕ ವೀಕ್ಷಕರು, ಎಂಸಿಎಂಸಿ, ಸೇರಿದಂತೆ ಚುನಾವಣಾ ಸಿಬ್ಬಂದಿಗಳು ಹಾಜರಿದ್ದರು.